ಬಾಗಲಕೋಟೆ:Kabaddi for AIDS awareness ಎಚ್.ಐ.ವಿ/ಏಡ್ಸ್ ಜಾಗೃತಿ ಅಂಗವಾಗಿ 18 ರಿಂದ 25 ವಯಸ್ಸಿನ ಪದವಿ, ಸ್ನಾತಕೋತ್ತರ, ವೃತ್ತಿಪರ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ಕ್ರೀಡಾ ಇಲಾಖೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಗೆ ಟಾಸ್ ಮಾಡುವ ಮೂಲಕ ಪಂದ್ಯಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಚಾಲನೆ ನೀಡಿದರು.
ಇದನ್ನೂ ಓದಿ: Bagalkote News | ಕನ್ನಡ ಉಳಿಸಿ, ಬೆಳೆಸುವ ಕೆಲಸವಾಗಲಿ : ಡಿಸಿ ಜಾನಕಿ
Kabaddi for AIDS awareness ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೆಚ್ಐವಿ/ಏಡ್ಸ ತಡೆಗಟ್ಟಲು ತೀವ್ರತರದ ಐಇಸಿ ಪ್ರಚಾರಾಂದೋಲನ-2024 ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸದರಿ ಪಂದ್ಯಾವಳಿಯಲ್ಲಿ ಬಾಗಲಕೋಟೆ ಜಿಲ್ಲೆಯ 20 ತಂಡಗಳು ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕಟಂಬ ಕಲ್ಯಾಣಾಧಿಕಾರಿ ಡಾ.ಸುವರ್ಣಾ ಕುಲಕರ್ಣಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ.ಬಳ್ಳಾರಿ, ಕಾರ್ಯದರ್ಶಿ ವಿಠಲ ವಾಲಿಕಾರ, ಆರೋಗ್ಯ ಶಿಕ್ಷಣ ಅಧಿಕಾರಿ ಶಶಿಕಲಾ ಸಿನ್ನೂರ, ಉಪ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಕಾಂತ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ಬಿ.ಎಲ್.ಹೊಸಳ್ಳಿ ಉಪಸ್ಥಿತರಿದ್ದರು.
ಪಂದ್ಯಾ ವಳಿಯ ನಿರ್ಣಾಯಕರಾಗಿ ದೈಹಿಕ ಶಿಕ್ಷಕ ವಿಠಲ ಎಲ್ ವಾಲಿಕಾರ, ಪ್ರಸನ್ನಕುಮಾರ ಚೂರಿ, ಸುರೇಶ ಅಯ್ಯಪ್ಪ ಗಣಿ, ಹನಮಂತ ತುಂಬರಮಟ್ಟಿ, ರವಿ ಹೊಸಮನಿ ಇಸ್ಮಾಯಿಲ್ ಗಡೇದ ಆನಂದ ಬಾರಡ್ಡಿ, ಮಂಜುನಾಥ ಸೊನ್ನದ ಪಾಲ್ಗೊಂಡಿದ್ದರು.






