ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವರಲ್ಲಿ ಮನವಿ

ವಿಜಯಪುರ: ರಾಜ್ಯ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಜಾಹೀರಾತು ನೀತಿ–2026ನ್ನು ಸ್ಥಗಿತಗೊಳಿಸಿ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಅಭಿವೃದ್ದಿಗೆ ಪೂರಕ ನೀತಿಯನ್ನು ಅಳವಡಿಸಿ ಅನುಷ್ಠಾನಕ್ಕೆ ತರಬೇಕೆಂದು ಸಚಿವರಾದ ಡಾ. ಎಂ.ಬಿ.ಪಾಟೀಲ ಹಾಗೂ ಶಿವಾನಂದ ಅವರಲ್ಲಿ ಜಿಲ್ಲಾ ಪತ್ರಿಕೆಗಳು ಮನವಿ ಸಲ್ಲಿಸಿತು.
ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿವೆ. ಆದರೆ ಹೊಸ ಜಾಹೀರಾತು ನೀತಿಯಲ್ಲಿ ಈ ಪತ್ರಿಕೆಗಳ ಹಿತಾಸಕ್ತಿಯನ್ನು ಸಂಪೂರ್ಣ ವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಲಾಗಿದೆ. ವಿಶೇಷವಾಗಿ, ಈ ನೀತಿಯನ್ನು ರೂಪಿಸುವ ವೇಳೆ ಯಾವುದೇ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದೆ ಏಕಪಕ್ಷೀಯವಾಗಿ ತಯಾರಿಸಿರುವುದು ವಿಷಾದನೀಯವಾಗಿದೆ ಎಂದು ತಿಳಿಸಿದೆ.
ಬೃಹತ್ ಮತ್ತು ಮದ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಹಾಗೂ ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಹೇಳುತ್ತಿರುವಾಗ, ಹೊಸ ಜಾಹೀರಾತು ನೀತಿಯಿಂದಾಗಿ ಪತ್ರಿಕೆಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿದಂತಾಗಿದೆ ಆದ್ದರಿಂದ ತಕ್ಷಣವೇ ಹೊಸ ಜಾಹೀರಾತು ನೀತಿಯನ್ನು ನಿಲ್ಲಿಸಿ ಪತ್ರಿಕೆಗಳಿಗೆ ಪೂರಕವಾಗುವ ನೀತಿಯನ್ನು ತರಬೇಕೆಂದು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸಬೇಕೆಂದು ಮನವಿಮಾಡಿಕೊಂಡಿತು.
ಜಾಹೀರಾತು ನೀತಿಯಲ್ಲಿ ಯಾವಾವ ಅಂಶಗಳು ಇರಬೇಕೆಂಬುದರ ಬಗ್ಗೆ ಸಮಗ್ರ ವಿವರಣೆಯನ್ನು ನೀಡಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾದ್ಯಮ ಸಲಹೆಗಾರರಾದ ಕೆ.ವ್ಹಿ.ಪ್ರಭಾಕರ ಅವರಲ್ಲಿ ಪತ್ರಿಕೆಗಳ ಹಿತಾಸಕ್ತಿಯನ್ನು ಪರಿಗಣಿಸುವಂತೆ ಒತ್ತಾಯಿಸುವದಾಗಿ ಭರವಸೆಯನ್ನು ಪತ್ರಿಕಾ ಬಳಗಕ್ಕೆ ನೀಡಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಇರ್ಪಾನ್ ಶೇಖ, ಹಿರಿಯ ಸಂಪಾದಕರಾದ ಮೋಹನ ಕುಲಕರ್ಣಿ, ಪಾಂಡುರAಗ ಮಮದಾಪುರ, ಮಹೇಶ ಶೆಟಗಾರ, ಮಾಧವರಾವ ಕುಲಕರ್ಣಿ, ಸುಶೀಲೇಂದ್ರ ನಾಯಕ, ಕೌಶಲ್ಯ ಪನಾಳಕರ, ಸಂಜಯ ಕೊಂಡಗೂಳಿ, ಸೀತಾರಾಮ ಕುಲಕರ್ಣಿ, ಇಂದುಶೇಖರ ಮಣೂರ, ಸಂಜೀವ ಕುಲಕರ್ಣಿ, ಶರದಕುಮಾರ ಅರ್ಜುಣಗಿ, ಸಿದ್ದಣ್ಣ ವಿಜಾಪುರ, ಅವಿನಾಶ ಬಿದರಿ, ಚಿದಂಬರ ಕುಲಕರ್ಣಿ, ಪವನ ಕುಲಕರ್ಣಿ, ಶರಣು ಮಸಳಿ, ವಿನೋದ ಸಾರವಾಡ, ಕೆ. ಕೆ. ಕುಲಕರ್ಣಿ, ಗುರು ಗದ್ದನಕೇರಿ, ಫಯಾಜ್ ಕಲಾದಗಿ, ಪುಂಡಲಿಕ ಮುರಾಳ ಮುಂತಾದವರು ಉಪಸ್ಥಿತರಿದ್ದರು.
Share the Post:

ಇತ್ತೀಚಿನ ಸುದ್ದಿಗಳು