ವಿಜಯಪುರ: ಭಾರತ ಜನಗಣತಿ-2027ರ ಒಂದನೇ ಹಂತದಲ್ಲಿ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಏ.16 ರಿಂದ ಮೇ 15 ರವರೆಗೆ 30 ದಿನಗಳ ಕಾಲ ನಡೆಯಲಿದ್ದು, ಗಣತಿದಾರರು ತಮ್ಮ ಮನೆಗಳಿಗೆ ಭೇಟಿ ನೀಡಿದ ವೇಳೆ ಅವರು ಕೇಳುವ ಪ್ರಶ್ನೆಗೆ ಉತ್ತರ ನೀಡುವ ಮೂಲಕ ಗಣತಿ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
ತಮ್ಮ ಮನೆಗೆ ಭೇಟಿ ನೀಡುವ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ಸಹಕರಿಸುವ ಮೂಲಕ ಭಾರತ ಜನಗಣತಿ ಕಾರ್ಯ ಯಶಸ್ವಿಗೊಳಿಸಬೇಕು ಎಂದು ತಿಳಿಸಿದ್ದಾರೆ. ಸ್ವಯಂ ಗಣತಿದಾರರಿಗೆ ಅಭಿನಂದನೆ ಜನಗಣತಿ-2027 ರ ಮೊದಲ ಹಂತದಲ್ಲಿ ಏ. 1ರಿಂದ 15 ರವರೆಗೆ ನಡೆದ ಸ್ವಯಂ ಗಣತಿ ಕಾರ್ಯದಲ್ಲಿ ಪಾಲ್ಗೊಂಡ ಜಿಲ್ಲೆಯ 14042 ನಾಗರಿಕರಿಗೆ ಇದೇ ವೇಳೆ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.





