ಏ.21: ಅಕ್ಕಮಹಾದೇವಿ ಮಹಿಳಾ ವಿವಿ 17ನೇ ಘಟಿಕೋತ್ಸವ

karnataka state akkamahadevi women's university image

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿಗಳು, ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸಹಯೋಗದಲ್ಲಿ ಏ.21ರ ಬೆಳಿಗ್ಗೆ 11:30 ಗಂಟೆಗೆ ನಗರದ ಹೊರವಲಯದಲ್ಲಿರುವ ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ.
ಕನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಗೌರವಾನ್ವಿತ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಗ್ರಾಸನ ವಹಿಸುವರು.

ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಪತಿಗಳಾದ ಡಾ.ಎಂ.ಸಿ ಸುಧಾಕರ್ ಉಪಸ್ಥಿತರಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈನ(ಎಸ್.ಎನ್.ಡಿಟಿ) ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀಮತಿ ನಾಥಿಬಾಯಿ ದಾಮೋದರ್ ಠಾಕರ್ಸಿ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೋ. ವಿಜಯಾ ಬಿ. ಕೋರಿಶೆಟ್ಟಿ ಭಾಗವಹಿಸುವವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share the Post:

ಇತ್ತೀಚಿನ ಸುದ್ದಿಗಳು