ವಿಜಯಪುರ : ವಿಜಯಪುರ ನಗರ ವ್ಯಾಪ್ತಿಯಲ್ಲಿ vijayapura crime ನಡೆದ ವಿವಿಧ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ಪ್ರಕರಣಗಳನ್ನು ಬೇಧಿಸಿ ಪ್ರಕರಣಗಳಿಗೆ ಸಂಬಂಧಿಸಿದಂತೆ 28 ಆರೋಪಿಗಳನ್ನು ಬಂಧಿಸಿ 1,60,32,000 ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾತನಾಡಿ, ಕಳೆದ ವರ್ಷ 17 ಪ್ರಕರಣಗಳಿಗೆ ಸಂಬಂಧಿಸಿದಂತೆ 28 ಆರೋಪಿಗಳನ್ನು ಹಾಗೂ ಪ್ರಸಕ್ತ ವರ್ಷ 13 ಪ್ರಕರಣಗಳಿಗೆ ಸಂಬAಧಿಸಿದAತೆ 15 ಜನ ಆರೋಪಿಗಳನ್ನು ಬಂಧಿಸಿ ಒಟ್ಟು 1.60 ಕೋಟಿ ರೂ.ಗೂ ಅಧಿಕ ಸ್ವೊತ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ, ವಶಪಡಿಸಿಕೊಳ್ಳಲಾಗಿರುವ ಸ್ವೊತ್ತುಗಳಲ್ಲಿ ಬಂಗಾರ-ಬೆಳ್ಳಿ ಆಭರಣ, ಕಾರು ಹಾಗೂ ವಿವಿಧ ಇಲೆಕ್ಟ್ರಾನಿಕ್ಸ್ ಉಪಕರಣಗಳು ಸೇರಿವೆ ಎಂದರು.
ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ 2026 ನೇ ಸಾಲಿನಲ್ಲಿ ಏಳು ಪ್ರಕರಣಗಳನ್ನು ಬೇಧಿಸಿ 6 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, 27.25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದರು.
ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಕಳೆದ ಸಾಲಿನಲ್ಲಿ 6 ಪ್ರಕರಣಗಳಿಗೆ ಸಂಬಂಧಿಸಿದಂತೆ 6 ಜನ ಅರೋಪಿಗಳನ್ನು ಹಾಗೂ ಪ್ರಸಕ್ತ ವರ್ಷದಲ್ಲಿ 1 ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರೋಪಿಗಳನ್ನು ಬಂಧಿಸಲಾಗಿದ್ದು, ಒಟ್ಟಾರೆಯಾಗಿ 33.02 ಲಕ್ಷ ರೂ. ಜಪ್ತು ಮಾಡಿಕೊಳ್ಳಲಾಗಿದೆ ಎಂದರು.
vijayapura crime ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಸಕ್ತ ವರ್ಷದಲ್ಲಿ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 19.20 ಲಕ್ಷ ರೂ.ಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಫ್ತಿಯಲ್ಲಿ 2025 ನೇ ಸಾಲಿನಲ್ಲಿ 10 ಪ್ರಕರಣಗಳಲ್ಲಿ 21 ಆರೋಪಿಗಳನ್ನು ಬಂಧಿಸಲಾಗಿದೆ, ಬಂಧಿತ ಆರೋಪಿಗಳಿಂದ 74.55 ಲಕ್ಷ ರೂ. ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ, ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025 ರಲ್ಲಿ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ, ಆರೋಪಿಯಿಂದ 6.30 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದರು.






