ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಮೇ 1, ಶುಕ್ರವಾರ ನಗರದಲ್ಲಿ ‘ಭಗವಾನ್ ಬುದ್ಧ ಜಯಂತಿ’ಯನ್ನು ಅತ್ಯಂತ ಸಡಗರದಿಂದ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ, vijayapura buddha jayanti ನಂತರ ಬೆಳಿಗ್ಗೆ 8:30ಕ್ಕೆ ವಿಶ್ವಭೂಷಣ ಡಾ.ಬಿ.ಆರ್. ಅಂಬೇಡ್ಕರ್ ಭವನದಿಂದ ಜಿಲ್ಲಾ ಪಂಚಾಯತ್ ಆವರಣದಿಂದ ಬುದ್ಧ ವಿಹಾರದವರಗೆ ಭವ್ಯ ಮೆರವಣಿಗೆ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಬುದ್ಧ ವಿಹಾರದಲ್ಲಿ ಪ್ರಾರ್ಥನೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
vijayapura buddha jayanti ಕಾರ್ಯಕ್ರಮದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶ್ರೀ ಶಿವಾನಂದ ಎಸ್. ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ್ ಎನ್. ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–2 ಹಾಗೂ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಿ.ಎಸ್.ಕವಲಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಕೇಶವ ಪ್ರಸಾದ ಎಸ್, ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಎಸ್ ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ. ವಿಶೇಷ ಉಪನ್ಯಾಸ :ತಾಳಿಕೋಟೆಯ ಎಸ್. ಕೆ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಜಾತಾ ಚಲವಾದಿ ಅವರು ಭಗವಾನ ಬುದ್ಧರ ತತ್ವಗಳು ಮತ್ತು ಜೀವನದ ಕುರಿತು ವಿಶೇಷಉಪನ್ಯಾಸ ನೀಡಲಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.






