Guest Lecturer Recruitment ಗೆ ಅರ್ಜಿ ಆಹ್ವಾನ

Guest Lecturer Recruitment ಅರ್ಜಿ ಆಹ್ವಾನ ವಿಜಯಪುರ

ವಿಜಯಪುರ: 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ 15 ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ Guest Lecturer Recruitment ಪ್ರಕ್ರಿಯೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ.

Guest Lecturer Recruitment ನೇಮಕಾತಿ ವಿವರ

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ ಅಥವಾ ವರ್ಗಾವಣೆ ಮೂಲಕ ಹುದ್ದೆ ಭರ್ತಿಯಾಗುವವರೆಗೆ ಅಥವಾ ಪ್ರಸ್ತುತ ಸಾಲಿನ ಅಂತ್ಯದವರೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಮುಂದುವರಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಮೇ 25ರೊಳಗಾಗಿ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ್ ಭವನ, ಜಿಲ್ಲಾ ವಿಜ್ಞಾನ ಚಟುವಟಿಕೆ ಕೇಂದ್ರದ ಹತ್ತಿರ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ: 08352-295523 ಎಂದು ಪ್ರಕಟಣೆ ತಿಳಿಸಿದೆ.

Share the Post:

ಇತ್ತೀಚಿನ ಸುದ್ದಿಗಳು