ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

0
104

ವಿಜಯಪುರ ಮಾ 06: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ.ಎ ಬಂಗಾರಮ್ಮ ಸಜ್ಜನ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮಹಿಳಾ ಜಾಗೃತಿ ಮ್ಯಾರಥಾನ್ ಹಾಗೂ ಸೈಕಲ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಕೇಂದ್ರ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಿಜಯಪುರ (ವಾರ್ತಾ ಮತ್ತು ಪ್ರಸಾರ ಸಚಿವಾಲಯ) ಹಾಗೂ ವಿವಿಧ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ 7.30 ಗಂಟೆಗೆ ನಗರದ ಬಂಗಾರಮ್ಮ ಸಜ್ಜನ ಕಾಲೇಜ ಮೂಲಕ ಸೈಕಲ್ ಜಾಥಾ ಹಾಗೂ ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಂಡರು.
ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬಂದು ತಮ್ಮ ಸ್ವಸಾಮಥ್ರ್ಯದ ಮೂಲಕ ಸಮಾಜದಲ್ಲಿ ಗುರ್ತಿಸಿಕೊಳ್ಳುವುದು ಹಾಗೂ ಜನರಲ್ಲಿ ಲಿಂಗ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆಯನ್ನು ಸಂದೇಶ ಸಾರುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರತಿವರ್ಷ ಹಮ್ಮಿಕೊಳ್ಳುವಂತೆ ಇಂದು ಜನರಲ್ಲಿ ಅರಿವು ಮೂಡಿಸಲಾಗುತ್ತದೆ.
ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಫೆಡರೇಶನ್‍ನ ಅಧ್ಯಕ್ಷ ಡಾ. ಜಾವೇದ್ ಜಮಾದಾರ, ಪಿಎಸ್‍ಐ ಶರಣಗೌಡರ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಎಸ್.ಜಿ ಲೋಣಿ, ಮಹಿಳಾ ಅಭಿವೃದ್ಧಿ ನಿಗಮದ ಸಂಯೋಜಕಿ ಭಾರತೀ ಪಾಟೀಲ, ಕಾಲೇಜಿನ ಪ್ರಾಚಾರ್ಯ ಎಸ್.ಜೆ.ಪವಾರ, ಕ್ಷೇತ್ರ ಜನಸಂಪರ್ಕ ಇಲಾಖೆಯ ಸಂಯೋಜಕ ಮುರಳಿಧರ ಕಾರಬಾರಿ, ವಿಶಾಲ ಹಿರಾಸ್ಕರ, ಪಲ್ಲವಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ, ವಿದ್ಯಾರ್ಥಿನಿಯರು, ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು, ಸೈಕ್ಲಿಂಗ್ ಪಟುಗಳು ವಿವಿಧ ಇಲಾಖೆಯ ಸಿಬ್ಬಂದಿ ವರ್ಗ ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here