ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

0
194

ವಿಜಯಪುರ ಮಾ 11: ಕನ್ನಡ ಪುಸ್ತಕ ಪ್ರಾಧಿಕಾರದಿಂದ 2019ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಉದ್ದೇಶದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಸ್ವವಿವರವುಳ್ಳ ಮನವಿ ಪತ್ರದೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಹಾಗೂ ಪ್ರಸ್ತುತ ಸಲ್ಲಿಸುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಅದು ಎಲ್ಲಿಯೂ ಪ್ರಕಟವಾಗಿಲ್ಲ ಎಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರೆ ಯಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯು ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಥತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರು ಕುರಿತಂತೆ ನೇರವಾಗಿ ಅಥವಾ ಪರೋಕ್ಷವಾಗಿಯಾಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ಸಂಗತಿಗಳ ಪ್ರಸ್ತಾಪವಿರಬಾರದು.
ಅರ್ಜಿಗಳನ್ನು ದಿನಾಂಕ 15-04-2020ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು-560002 ಅವರಿಗೆ ಕಳುಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ : 080-224845516/22017704 ಸಂಪರ್ಕಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ambedkar image

LEAVE A REPLY

Please enter your comment!
Please enter your name here