ಪ್ರಧಾನಿಯವರ ಅಧ್ಯಕ್ಷತೆಯಲ್ಲಿ COVID-19 ಪರಿಶೀಲನಾ ಸಭೆ

0
77
ಪ್ರಧಾನಿ ನರೇಂದ್ರ ಮೋದಿ

COVID-19 ನಿಗ್ರಹಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಪರೀಕ್ಷಾ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸುವುದೂ ಸೇರಿದಂತೆ ಭಾರತದ ಸನ್ನದ್ಧತೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

COVID-19 ರ ಭೀತಿಯ ವಿರುದ್ಧ ಹೋರಾಡಲು ಆಡಳಿತವು ವ್ಯಕ್ತಿಗಳು, ಸ್ಥಳೀಯ ಸಮುದಾಯಗಳು ಮತ್ತು ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಬಗ್ಗೆ ಪ್ರಧಾನಿಯವರು ಒತ್ತಿ ಹೇಳಿದರು. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಮತ್ತು ತಂತ್ರಜ್ಞರು ಆಲೋಚಿಸಬೇಕು ಅವರು ಆಗ್ರಹಿಸಿದರು.

ವಿವಿಧ ರಾಜ್ಯ ಸರ್ಕಾರಗಳು, ವೈದ್ಯಕೀಯ ಸಮುದಾಯ, ಅರೆವೈದ್ಯಕೀಯ ಸಿಬ್ಬಂದಿ, ಸಶಸ್ತ್ರ ಮತ್ತು ಅರೆಸೈನಿಕ ಪಡೆಗಳು, ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದವರು, ಪುರಸಭೆಯ ಸಿಬ್ಬಂದಿ ಮತ್ತು ಇತರರು ಸೇರಿದಂತೆ COVID-19ನ್ನು ಎದುರಿಸಲು ಮುಂಚೂಣಿಯಲ್ಲಿರುವ ಎಲ್ಲರಿಗೂ ಪ್ರಧಾನಿಯವರು ಕೃತಜ್ಞತೆ ಸಲ್ಲಿಸಿದರು.

ಪ್ರಧಾನಮಂತ್ರಿಯವರು ಇಂದು (2020 ರ ಮಾರ್ಚ್ 19) ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದು, ಈ ಸಂದರ್ಭದಲ್ಲಿ ಅವರು COVID-19 ಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಅದನ್ನು ಎದುರಿಸುವ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here