ಒತ್ತಾಯ ಪೂರ್ವಕ ಬಾಡಿಗೆ ವಸೂಲಿ ಮಾಡುವಂತಿಲ್ಲ : -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

0
151

ವಿಜಯಪುರ ಮಾ 31: ಕೋವಿಡ್-19 ಪರಿಸ್ಥಿತಿಯ ದುರುಪಯೋಗ ಪಡೆಸಿಕೊಂಡು ಯಾರಾದರು ಒತ್ತಾಯಪೂರ್ವಕವಾಗಿ ಮನೆ ಬಾಡಿಗೆ ವಸೂಲಿ ಹಾಗೂ ಮನೆ ಖಾಲಿಗೆ ಸೂಚಿಸಿದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅಂತಹವರ ಬಗ್ಗೆ ದೂರುಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ ಎಂದು ಹೇಳಿದರು.
ಇಂದು ಪೂರ್ವಾಹ್ನವರೆಗೆ ಜಿಲ್ಲೆಯಲ್ಲಿ 332 ಜನರು ವಿದೇಶದಿಂದ ಆಗಮಿಸಿರುವ ಬಗ್ಗೆ ವರದಿಯಾಗಿದೆ. 57 ಜನ 28 ದಿನಗಳ ಅವಧಿ ಪೂರ್ಣಗೊಳಿಸಿದ್ದಾರೆ. 241 ಜನ 15 ರಿಂದ 28 ದಿನಗಳ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. 34 ಜನ ಹೋಮ್‍ಕ್ವಾರಂಟೈನ್‍ದಲ್ಲಿದ್ದಾರೆ. ಈವರೆಗೆ ಕಳುಹಿಸಿದ 12 ಪ್ರಕರಣಗಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಂದ್ರ ಕಾಪ್ಸೆ, ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿ ಮುಕುಂದ ಗಲಗಲಿ, ಜಿಲ್ಲಾಸ್ಪತ್ರೆ ಸರ್ಜನ್ ಶರಣಪ್ಪ ಕಟ್ಟಿ, ಆಹಾರ ಇಲಾಖೆ ಜಂಟಿ ನಿರ್ದೇಶಕಿ ಕುಮಾರಿ ಸುರೇಖಾ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಮಲ್ಲನಗೌಡ ಬಿರಾದಾರ, ಕುಷ್ಟರೋಗ ನಿಯಂತ್ರಾಧಿಕಾರಿ ಸಂಪತಕುಮಾರ ಗುಣಾರೆ, ಡಾ. ಧಾರವಾಡಕರ, ಶ್ರೀ ಲಕ್ಕಣ್ಣವರ್, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಪ್ರಾಣೇಶ ಜಾಹಗೀರದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here