ಬಾಬು ಜಗಜೀವನರಾಮ್-ಅಂಬೇಡ್ಕರ್ ಜಯಂತಿ ಸರಳ ರೀತಿಯಲ್ಲಿ ಆಚರಿಸಲು ಮನವಿ

0
98

ವಿಜಯಪುರ ಎ.02: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ ರವರ ಜಯಂತಿಯನ್ನು ಕಚೇರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಮನವಿ ಮಾಡಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‍ಡೌನ್ ಮಾಡಿರುವ ಹಿನ್ನಲೆಯಲ್ಲಿ ಯಾವುದೇ ಸಭೆ, ಸಮಾರಂಭವನ್ನು ಏರ್ಪಡಿಸದಿರಲು ನಿಷೇಧ ಮಾಡಿರುವುದರಿಂದ ಪ್ರಸಕ್ತ ಸಾಲಿನ ದಿನಾಂಕ 05-04-2020 ರಂದು ಬಾಬು ಜಗಜೀವನರಾಮ್ ಜನ್ಮದಿನಾಚರಣೆ ಹಾಗೂ ದಿನಾಂಕ 14-04-2020 ರಂದು ಭಾರತರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಸರ್ಕಾರದ ನಿಯಮಾವಳಿಗಳ ಅನ್ವಯ ಕಚೇರಿಗಳಲ್ಲಿ ಮಹಾನುಭಾವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸರಳ ರೀತಿಯಲ್ಲಿ ಜಯಂತಿ ಆಚರಿಸಲು ಜಿಲ್ಲಾಧಿಕಾರಿ ವೈ,ಎಸ್ ಪಾಟೀಲ್ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here