ಅನಾವಶ್ಯಕವಾಗಿ ಓಡಾಡುವ ವಾಹನ ಸವಾರರೆ ಎಚ್ಚರ !

0
185

ವಿಜಯಪುರ ಎ.07: ಲಾಕ್‍ಡೌನ್ ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ, ಕೋರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಅನಾವಶ್ಯಕವಾಗಿ ಓಡಾಡುವ ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ನೀಡಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಾಹನವನ್ನು ವಶಪಡಿಸಿಕೊಂಡು (ಸೀಜ್) ತಡೆಹಿಡಿಯುವ ಅಧಿಕಾರವನ್ನು ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಿಗೆ ಅಧಿಕಾರಿವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದ್ದು, ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿರುತ್ತದೆ.
ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನದ ಮೇಲೆ ದಿನಸಿ ಆಹಾರ ಮತ್ತು ಇತರೆ ಅಗತ್ಯ ವಸ್ತುಗಳ ಖರೀದಿಸುವವಂಥವರಿಗೆ ಮತ್ತು ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ambedkar image

LEAVE A REPLY

Please enter your comment!
Please enter your name here