ಗುತ್ತಿಗೆಗಾರರಿಂದ, ಕಟ್ಟಡ ಮಾಲೀಕರಿಂದ ಕೂಲಿ ಕಾರ್ಮಿಕರಿಗೆ ಊಟ, ವಸತಿ ವ್ಯವಸ್ಥೆ ಮಾಡುವಂತೆ ಸೂಚನೆ

0
122

ವಿಜಯಪುರ ಎ.10 : ಏಪ್ರೀಲ್ -14 ರವರೆಗೆ ದೇಶಾದ್ಯಂತ ಲಾಕ್‍ಡೌನ್ ಇರುವ ಹಿನ್ನೆಲೆ,
ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಸಾಗಾಣಿಕೆಗಾಗಿ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಮಾಡುವವರಿಗಾಗಿ ಅಂದರೆ ಆಹಾರ, ದಿನಸಿ ಅಂಗಡಿಗಳ, ಹಾಲು ತರಕಾರಿ, ದಿನಬಳಕೆ ವಸ್ತುಗಳ, ಮಾಂಸ-ಮೀನು, ಹಣ್ಣು. ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳು ಮತ್ತು ಅಂಗಡಿಗಳು, ಪೆಟ್ರೋಲ್ ಬಂಕ್‍ಗಳು, ಗ್ಯಾಸ್, ಎಲ್.ಪಿ.ಜಿ ತೈಲ್ ಎಜೆನ್ಸಿಗಳು, ಆಸ್ಪತ್ರೆಗಳು, ಚಿಕಿತ್ಸಾಲಯಗಳು, ಔಷಧಾಲಯಗಳು, ಮಿನರಲ್ ವಾಟರ್ ಸೇರಿದಂತೆ ಇನ್ನಿತರ ಸೇವೆಗಳಿಗೆ ವಿನಾಯಿತಿ ನೀಡಲಾಗಿದ್ದು, ಅದರಂತೆ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಸಚಿವರು ನಡೆಸಿದ ವಿಡಿಯೋ ಸಂವಾದದಲ್ಲಿ ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಮತ್ತು ನಿರ್ಗತಿಕರು, ಕೂಲಿ ಕಾರ್ಮಿಕರು, ಕಟ್ಟಡಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ಇತ್ಯಾದಿ ವಿವಿಧ ಇಲಾಖೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಊಟ ವಸತಿ ವ್ಯವಸ್ಥೆಯನ್ನು ಮಾಡುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರ ಹಾಗೂ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶಿಸಿದ್ದಾರೆ.ಜಿಲ್ಲೆಯಾದ್ಯಂತ ಕೂಲಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ಕೆಲಸ ಮಾಡುತ್ತಿರುವ ಸ್ಥಳದಲ್ಲಿಯೇ ಗುತ್ತಿಗೆದಾರರಿಂದ, ಕಟ್ಟಡ ಮಾಲೀಕರಿಂದ ಊಟದ ವ್ಯವಸ್ಥೆ ಮಾಡಿಸಬೇಕು. ಊಟದ ವ್ಯವಸ್ಥೆಯನ್ನು ಮಾಡಲು ನಿರಾಕರಿಸಿದ ಗುತ್ತಿಗೆದಾರರು, ಕಟ್ಟಡ ಮಾಲೀಕರ ಮೇಲೆ ನಿಯಮಾನುಸಾರ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಲಾಕ್‍ಡೌನ್ ಮುಗಿಯುವವರೆಗೆ ಎಲ್ಲ ಕೂಲಿ ಕಾರ್ಮಿಕರಿಗೆ ಊಟವನ್ನು ಸುಲಭ, ಸರಳವಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶಿಸಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ನಿರ್ಣಯದಂತೆ ಮತ್ತು ಸಾಂಕ್ರಾಮಿಕ ರೋಗ ಕಾಯ್ದೆ -1897 ರಡಿ ಹೊರಡಿಸಿದ ಅಧಿಸೂಚನೆಯನ್ವಯ ಕೂಲಿ ಕಾರ್ಮಿಕರು, ಕಟ್ಟಡಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ಇತ್ಯಾದಿ ಕಾರ್ಯಗಳಲ್ಲಿ ತೊಡಗಿರುವವರಿಗೆ ಅವರು ಕಾರ್ಯನಿರ್ವಹಿಸವ ಗುತ್ತಿಗೆಗಾರರಿಂದ, ಕಟ್ಟಡ ಮಾಲೀಕರಿಂದ ಊಟ, ವಸತಿ ವ್ಯವಸ್ಥೆಯನ್ನು ಅವರು ಕಾರ್ಯನಿರ್ವಹಿಸುವ ಸ್ಥಳದಲ್ಲೇ ಒದಗಿಸುವ ಕುರಿತು ಮತ್ತು ಈ ವಿಷಯದಲ್ಲಿ ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಮಟ್ಟದಲ್ಲಿ ಶ್ರೀ ಸೂರ್ಯಪ್ಪ ಡೊಂಬರಮಾಸೂರ, ಕಾರ್ಮಿಕ ಅಧಿಕಾರಿಗಳು, ಉಪವಿಭಾಗ-1, ಮೊ:94487-65102 ಹಾಗೂ ಶ್ರೀ ಎಸ್.ಜಿ ಖೈನೂರ, ಕಾರ್ಮಿಕ ಅಧಿಕಾರಿಗಳು, ಉಪವಿಭಾಗ -2, ಮೊ: 78925-39867 ಇವರನ್ನೊಳಗೊಂಡ ತಂಡವನ್ನು ರಚಿಸಿದ್ದು, ಜಿಲ್ಲೆಯಾದ್ಯಂತ ಯಾವುದೇ ಕಾರ್ಮಿಕರಿಂದ ಊಟ ದೊರೆಯದ ಬಗ್ಗೆ ದೂರುಗಳು ಸ್ವೀಕೃತವಾದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here