ವಿಜಯಪುರದ ಸೀಲ್‍ಡೌನ್ ಪ್ರದೇಶಗಳಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮಾಡಲಾಗುವುದು: -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

0
231

ವಿಜಯಪುರ ಎ.12: ಸರ್ಕಾರದ ಆದೇಶದನ್ವಯ ಮತ್ತು ಕಂಟೇನ್‍ಮೆಂಟ್ ಪ್ಲ್ಯಾನ್ ಅನ್ವಯ ನಗರದ ಈ ಭೌಗೋಳಿಕ ಪ್ರದೇಶವನ್ನು ನಿಷೇಧಿತ ಪ್ರದೇಶ ಮತ್ತು ಕಂಟೇನ್‍ಮೆಂಟ್ ಜೋನ್ ಮತ್ತು ಬಫರ್ ಜೋನ್ ಎಂದು ಗುರುತಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಆ ಪ್ರದೇಶದ ಶುಚಿತ್ವವನ್ನು ಕಾಯ್ದುಕೊಳ್ಳಲು ಮಹಾನಗರ ಪಾಲಿಕೆ ಆಯುಕ್ತ ಶ್ರೀ ಹರ್ಷಾ ಶೆಟ್ಟಿ ( ಮೊ.ಸಂ: 9886745505) ಇವರ ನೇತೃತ್ವದಲ್ಲಿ ತಂಡವನ್ನು ರಚಿಸಿ ಆದೇಶ ನೀಡಿದ್ದಾರೆ.
ಸದರಿ ಪ್ರದೇಶಗಳಲ್ಲಿನ ಅಂಗಡಿ, ಮಳಿಗೆ, ದಾಸ್ತಾನು ಕೇಂದ್ರಗಳನ್ನು ಮುಚ್ಚಲು (ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಅಂಗಡಿ ಹೊರತುಪಡಿಸಿ) ಕ್ರಮಕೈಗೊಳ್ಳಬೇಕು. ನಿಷೇಧಿತ ಪ್ರದೇಶದಲ್ಲಿ ಅಗತ್ಯ ವಸ್ತುಗಳಾದ ದಿನಸಿ, ಹಾಲು, ಹಣ್ಣು ಮತ್ತು ತರಕಾರಿಗಳನ್ನು ಪ್ರತಿದಿನ ಬೆಳಿಗ್ಗೆ 8.00 ಗಂಟೆಯಿಂದ ಬೆಳಿಗ್ಗೆ 10.00 ಗಂಟೆವರೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು, ಸದರಿ ಪ್ರದೇಶದ ಶುಚಿತ್ವ ಕಾಪಾಡಲು, ಪೊಲೀಸ್ ಮತ್ತು ಇತರೆ ಇಲಾಖೆಗಳೊಂದಿಗೆ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಲು ಮತ್ತು ಸಹಾಯವಾಣಿ ಮೂಲಕ ಕೋರುವ ಸಾಮಗ್ರಿಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಮಾಡುವಂತೆ ಅವರು ಸೂಚಿಸಿದ್ದು, ನಿರ್ಲಕ್ಷ್ಯ-ಬೇಜವಾಬ್ದಾರಿ ತೋರಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳುವುದಾಗಿ ತಿಳಿಸಿರುವ ಅವರು ಸಾರ್ವಜನಿಕರು ಕೂಡ ಸಿಬ್ಬಂದಿಗಳೊಂದಿಗೆ ಸಹಕರಿಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವಶ್ಯಕ ಸಹಕಾರ ನೀಡಬೇಕು. ಯಾವುದೇ ರೀತಿಯ ಅನುಚಿತ ವರ್ತನೆ ಮತ್ತು ಮಾಹಿತಿ ನೀಡದೆ ಇದ್ದ ಪಕ್ಷದಲ್ಲಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಗೆ ಈವರೆಗೆ ವಿದೇಶ ಮತ್ತು ಇತರ ಕಡೆಯಿಂದ ಬಂದ 467 ಜನರ ಮೇಲೆ ತೀವ್ರ ನಿಗಾ ಇಡಲಾಗಿದ್ದು, 258 ಜನ 28 ದಿನಗಳ ಅವಧಿ ಪೂರ್ಣಗೊಳಿಸಿದ್ದಾರೆ. 138 ಜನ ರೀಪೋರ್ಟಿಂಗ್ ಅವಧಿಯಲ್ಲಿದ್ದು, 71 ಜನ ಹೋಮ್‍ಕ್ವಾರಂಟೈನ್‍ದಲ್ಲಿದ್ದಾರೆ. ಈವರೆಗೆ ಕಳುಹಿಸಲಾದ 110 ಗಂಟಲು ದ್ರವ ಮಾದರಿಗಳ ಪೈಕಿ 81 ಪರೀಕ್ಷಾ ವರದಿ ಲಭಿಸಿದೆ ಎಂದು ಅವರು ತಿಳಿಸಿದ್ದಾರೆ.
ತಂಡದಲ್ಲಿ ಮಹಾನಗರ ಪಾಲಿಕೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎಸ್ ಸುರ್ಕಿ (ಮೊ. ಸಂ:88675 62516) ಅದರಂತೆ ಇನ್ನೋರ್ವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಎಮ್ ಹುಂಡೇಕಾರ (ಮೊ.ಸಂ: 9845768889) ಇವರನ್ನು ನೇಮಿಸಿ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಅಗತ್ಯ ವಸ್ತುಗಳ ಪೂರೈಕೆಯ ಬೇಡಿಕೆ ಪಡೆಯಲು ಸಹಾಯವಾಣಿ ಕೇಂದ್ರವನ್ನು ಸಹ ಆರಂಭಿಸಲಾಗಿದೆ. ಸಹಾಯವಾಣಿ ಸಂಪರ್ಕಕ್ಕಾಗಿ ಶ್ರೀಮತಿ ಮುಜಾವರ್ – 8310425195, ಪ್ರೀತಿ ಇವನಿ – 8197804052, ಪಲ್ಲವಿ – 6363585604 ಇವರಿಗೆ ಅವಶ್ಯಕ ವಸ್ತುಗಳಿಗೆ ಸಂಪರ್ಕಿಸಬಹುದಾಗಿದೆ. ಅದರಂತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ 1077 ಗೂ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಂದ್ರ ಕಾಪ್ಸೆ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ.ಮುಕುಂದ ಗಲಗಲಿ, ಜಿಲ್ಲಾಸ್ಪತ್ರೆ ಡಾ.ಸರ್ಜನ್ ಶರಣಪ್ಪ ಕಟ್ಟಿ, ಆಹಾರ ಇಲಾಖೆ ಜಂಟಿ ನಿರ್ದೇಶಕಿ ಕುಮಾರಿ ಸುರೇಖಾ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಡಾ. ಧಾರವಾಡಕರ, ಡಾ. ಲಕ್ಕಣ್ಣವರ್, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಪ್ರಾಣೇಶ ಜಾಹಗೀರದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here