ನೀರು ಮಿತವಾಗಿ ಬಳಸಲು -ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ

0
204

ವಿಜಯಪುರ ಎ.18: ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಜಲಾಶಯದಿಂದ ಏತನೀರಾವರಿ ಹಂತ 3 ರಡಿ ಬರುವ ಮುಳವಾಡ ಮತ್ತು ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ ಬರುವ ಕೆರೆಗಳನ್ನು ತುಂಬಿಸಲು 2 ಟಿಎಂಸಿ ನೀರನ್ನು ಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

ಮುಳವಾಡ ಏತನೀರಾವರಿ ಜಾಲದಡಿ 70 ಕೆರೆಗಳು ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ 29 ಕೆರೆಗಳನ್ನು ತುಂಬಿಸಲು ನೀರು ಹರಿಸಲಾಗುವುದು. 3 ನೇ ಹಂತದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಾದ ಬ.ಬಾಗೇವಾಡಿ, ಮುದ್ದೇಬಿಹಾಳ, ದೇ.ಹಿಪ್ಪರಗಿ ಮತ್ತು ವಿಜಯಪುರ ತಾಲೂಕುಗಳ ಹಲವು ಕೆರೆಗಳಿಗೆ ನೀರು ತುಂಬಿಸಲಾಗುವುದು.

ಈಗ ಹರಿಸುವ ನೀರನ್ನು ಕೇವಲ ಬೇಸಿಗೆ ಕಾಲದಲ್ಲಿ ಜನ ಜಾನುವಾರುಗಳಿಗೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಬೇಕು. ಈ ಯೋಜನೆಯಡಿ ಬರುವ ಎಲ್ಲಾ ಸಾರ್ವಜನಿಕರು, ರೈತಾಪಿ ವರ್ಗದವರು ನೀರನ್ನು ಮಿತವಾಗಿ ಬಳಸಿಕೊಳ್ಳಬೇಕು. ಬೇಸಿಗೆ ಇನ್ನೂ 2 ತಿಂಗಳು ಇರುವ ಹಿನ್ನೆಲೆಯಲ್ಲಿ ಈ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಮಿತವಾಗಿ ಬಳಸಬೇಕು ಎಂದು ಮನವಿ ಮಾಡಿದ್ದಾರೆ.


 

ambedkar image

LEAVE A REPLY

Please enter your comment!
Please enter your name here