ವಿಜಯಪುರ: ಕೊರೋನಾ ಪ್ರಕರಣಗಳ ಕಾಂಟ್ಯಾಕ್ಟ್ ಟ್ರೇಸಿಂಗ್

0
92

ವಿಜಯಪುರ ಎ.18: ನಗರದಲ್ಲಿ ಕೊರೋನಾ ಸೋಂಕಿತ ಖಚಿತ ಪ್ರಕರಣಗಳು ಪತ್ತೆಯಾಗಿದ್ದು, ಕಾಂಟ್ಯಾಕ್ಟ್ ಟ್ರೇಸಿಂಗ್ ಮಾಡಲು ಅಧಿಕಾರಿ ಸಿಬ್ಬಂದಿಗಳನ್ನು ಒಳಗೊಂಡ ತಂಡ ರಚಿಸಿ ತಾಲೂಕಾ ಆರೋಗ್ಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಶ್‍ಮೆಂಟ್ಸ್ ಅಸೋಶಿಯೇಶನ್ ವೈದ್ಯರು ಕಂಟೇನ್ಮೆಂಟ್ ಪ್ರದೇಶಗಳು ಸೇರಿದಂತೆ ಇತರ ಭಾಗಗಳಲ್ಲಿ ಸೇವೆಸಲ್ಲಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಾಲೂಕಾ ಆರೋಗ್ಯ ಅಧಿಕಾರಿಗಳು ಈ ವೈದ್ಯರು, ಸಿಬ್ಬಂದಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಅದರಂತೆ ಈ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಮನೆ ಮನೆಗೂ ಹೋಗಿ ಕೊರೋನಾ ಪಾಸಿಟಿವ್ ಪ್ರಕರಣಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಪತ್ತೆ ಕಾರ್ಯವನ್ನು ಬೆಂಡಿಗೇರಿ ಗಲ್ಲಿಯಲ್ಲಿ, ರಾಯಲ್ ಪ್ಯಾಲೇಸ್ ಹೊಟೇಲ್ ಹಿಂದೆ ಕೈಗೊಂಡಿದ್ದಾರೆ.


 

LEAVE A REPLY

Please enter your comment!
Please enter your name here