ಸಾರ್ವಜನಿಕರಿಗೆ ಆತ್ಮವಿಶ್ವಾಸದ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬೈಕ್ ರ್ಯಾಲಿ ಮೂಲಕ ಜಾಗೃತಿ

0
130

ಹಾವೇರಿ: ಎ. 18 : ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಲಾಕ್‍ಡೌನ್ ಪಾಲನೆ, ಕರೋನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಅಗತ್ಯ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸ ತುಂಬುವ ಸಂದೇಶವನ್ನು ಸಾರ್ವಜನಿಕರಿಗೆ ಸಾರಲು ಪೊಲೀಸ್ ಇಲಾಖೆ ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ಹಾಗೂ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಹೊಸಮನಿ ಸಿದ್ದಪ್ಪ ವೃತ್ತದಿಂದ ಗುತ್ತಲ ರಸ್ತೆ ಮಾರ್ಗವಾಗಿ ಹೊರಟ ರ್ಯಾಲಿ ನಗರದ ಎಲ್ಲ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. 100 ಬೈಕ್‍ಗಳು, 20 ವಾಹನಗಳು ಹಾಗೂ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ 250ಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿ ಗಮನ ಸೆಳೆದರು.


 

LEAVE A REPLY

Please enter your comment!
Please enter your name here