ವಿಜಯಪುರ: ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಂದ ಅರ್ಜಿ ಆಹ್ವಾನ

0
154

ವಿಜಯಪುರ ಎ.26 : ಕೊರೋನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿ ಲಾಕ್‍ಡೌನ್ ನಿಯಮ ಜಾರಿಯಲ್ಲಿರುವುದರಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಧನ ಸಹಾಯ ಮಾಡಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ವೃತ್ತಿನಿರತ ಕಲಾವಿದರಾಗಿದ್ದು, ಕನಿಷ್ಠ 10 ವರ್ಷ ಕಲಾ ಸೇವೆ ಮಾಡಿರಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು, ಯಾವುದೇ ಸರ್ಕಾರಿ ನೌಕರಿಯಲ್ಲಿರಬಾರದು. ತಮ್ಮ ಆಧಾರ ಸಂಖ್ಯೆ, ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ (ಬ್ಯಾಂಕ್ ಪುಸ್ತಕದ ಝರಾಕ್ಸ್ ಪ್ರತಿ ಲಗತ್ತಿಸಿ) ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿ ಹಾಳೆಯ ಮೇಲೆ ಸ್ವ ವಿವರಗಳೊಂದಿಗೆ ಇಲಾಖೆಯ ಇ-ಮೇಲ್ [email protected] ಗೆ ದಿನಾಂಕ 27-04-2020 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಕ್ಕಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 

LEAVE A REPLY

Please enter your comment!
Please enter your name here