ವಿಜಯಪುರ: ಆಸ್ಪತ್ರೆ ಓಪನ್ ಮಾಡದಿದ್ರೆ ನೊಂದಣಿ ರದ್ದು-ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

0
250

ವಿಜಯಪುರ ಮೇ.01: ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳನ್ನು ತೆರೆದಿಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಇದಕ್ಕೆ ತಪ್ಪಿದಲ್ಲಿ ಆಯಾ ಆಸ್ಪತ್ರೆಗಳ ನೊಂದಣಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಸಭೆ ನಡೆಸಿದ ಅವರು ಜಿಲ್ಲೆಯಾದ್ಯಂತ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ ಇನ್ನೂ ಕೆಲವು ಆಸ್ಪತ್ರೆಗಳು ತೆರೆಯದೆ ಇರುವ ಬಗ್ಗೆ ಗಮನಕ್ಕೆ ಬಂದಿದ್ದು ಅಂತಹ ಆಸ್ಪತ್ರೆಗಳು ತಕ್ಷಣ ತೆರೆದು ಸಾರ್ವಜನಿಕರ ಸೇವೆಗೆ ಅಣಿಯಾಗಬೇಕು. ಈ ಕುರಿತಂತೆ ಯಾವುದೇ ರೀತಿಯ ದೂರು ಬಂದಲ್ಲಿ ಅಂತಹ ಆಸ್ಪತ್ರೆಗಳ ನೊಂದಣಿಯನ್ನು ತಕ್ಷಣ ರದ್ದುಗೊಳಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಇರುವಂತಹ 229 ಆರ್ಯುವೇದಿಕ್ ಕ್ಲೀನಿಕ್/ ನರ್ಸಿಂಗ್, 5 ಯುನಾನಿ, 29 ಹೋಮಿಯೋಪಥಿಕ್, 230 ಆಲೋಪಥಿಕ್ ಮತ್ತು 38 ಡೈಗ್ನೋಸ್ಟಿಕ್ ಆಸ್ಪತ್ರೆಗಳು ಯಾವುದೇ ಪರಿಸ್ಥಿತಿಯಲ್ಲಿ ಶ್ವ್ವಾಸಕೋಶ ತೊಂದರೆ(ಸಾರಿ) ಮತ್ತು ನೆಗಡಿ, ಕೆಮ್ಮು, ಜ್ವರ(ಐಎಲ್‍ಐ) ರೋಗಿಗಳನ್ನು ಉಪಚರಿಸುವಂತಿಲ್ಲ, ಇಂತಹ ರೋಗಿಗಳು ಕಂಡುಬಂದಲ್ಲಿ ತಕ್ಷಣ ತಜ್ಞವೈದ್ಯರ ಬಳಿಗೆ ಕಳುಹಿಸುವುದರ ಜೊತೆಗೆ ರೋಗಿ, ಸಂಬಂಧಿಸಿದ ಆಸ್ಪತ್ರೆಗೆ ತಲುಪಿದ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಈ ಕುರಿತು ಆಯಾ ತಾಲೂಕಾ ಆರೋಗ್ಯಾಧಿಕಾರಿಗಳು ಮತ್ತು ಐಎಮ್‍ಎ ಅಧ್ಯಕ್ಷರಿಗೂ ಮಾಹಿತಿ ಒದಗಿಸಬೇಕು. ರೋಗಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಟ್ಟುಕೊಂಡಿರಬೇಕು ಎಂದು ತಿಳಿಸಿರುವ ಅವರು ಈ ಆಸ್ಪತ್ರೆಗಳ ವೈದ್ಯರು ತಮ್ಮ ತಜ್ಞತೆಗೆ ತಕ್ಕಂತೆ ಚಿಕಿತ್ಸೆ ಒದಗಿಸುವಂತೆಯೂ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here