ಮಾಜಿ ಡಾನ್ ಮುತ್ತಪ್ಪ ರೈ ನಿಧನ

0
186

ಬೆಂಗಳೂರು ಮೇ. 15: ಭೂಗತ ಲೋಕದ ಡಾನ್ ಮುತ್ತಪ್ಪ ರೈ ಸುಮಾರು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದರು. ಕ್ಯಾನ್ಸರ್ ನಿಂದ ಗುಣಮುಖರಾಗಲು ಸಾಕಷ್ಟು ಸಲ ಆಸ್ಪತ್ರೆಗೆ ಹೋಗಿ ಬಂದಿದ್ದರು ಗುಣಮುಖರಾಗಿರಲಿಲ್ಲ. ದಿನೇ ದಿನೇ ಆರೋಗ್ಯ ಸ್ಥಿತಿ ಗಂಭೀರವಾಗತೊಡಗಿತ್ತು. ಏಪ್ರಿಲ್ 30 ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಮೂರ್ನಾಲ್ಕು ದಿನಗಳಿಂದ ಆರೋಗ್ಯದಲ್ಲಿ ಯಾವುದೇ ಸ್ಥಿರತೆ ಕಂಡಿರಲಿಲ್ಲ. ರೈ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಆಸ್ಪತ್ರೆಯಿಂದ ಅವರ ಬಿಡದಿ ನಿವಾಸಕ್ಕೆ ಮೃತದೇಹ ಕೊಂಡ್ಯೊಯಲಾಗುತ್ತಿದೆ. ಅವರ ನಿವಾಸದಲ್ಲಿ ಅಭಿಮಾನಿಗಳು, ಬೆಂಬಲಿಗರಿಗೆ ಅಂತಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆ ಬಳಿ ಬೆಂಬಲಿಗರು, ಸಂಘಟನೆಯವರು ಆಗಮಿಸುತ್ತಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಬಿಗಿಭದ್ರತೆ ಒದಗಿಸಲಾಗಿದೆ.


 

LEAVE A REPLY

Please enter your comment!
Please enter your name here