ವಿಜಯಪುರ: ಕೊರೋನಾದಿಂದ ಗುಣಮುಖರಾದವರ ಸಂಖ್ಯೆ 41 ಕ್ಕೆ ಏರಿಕೆ

0
222

ವಿಜಯಪುರ ಮೇ.21: ಕೊರೋನಾ ಸೋಂಕಿನಿಂದ ಗುಣಮುಖರಾದ ನಾಲ್ವರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರಾದವರ ಸಂಖ್ಯೆ 41 ಕ್ಕೆ ಏರಿದೆ.
ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡವರಲ್ಲಿ ಇಬ್ಬರು ಮಹಿಳೆಯರು, ಓರ್ವ ಬಾಲಕಿ ಹಾಗೂ ಓರ್ವ ಪುರುಷ ಗುಣಮುಖ ರೋಗಿ ಒಳಗೊಂಡಿದ್ದು, 38 ವರ್ಷದ ಮಹಿಳೆ (ರೋಗಿ ಸಂಖ್ಯೆ -275), 33 ವರ್ಷದ ಮಹಿಳೆ (ರೋಗಿ ಸಂಖ್ಯೆ-538), 11 ವರ್ಷದ ಬಾಲಕಿ (ರೋಗಿ ಸಂಖ್ಯೆ -769) ಹಾಗೂ 45 ವರ್ಷದ ಪುರುಷ (ರೋಗಿ ಸಂಖ್ಯೆ -510) ಇವರು ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 61 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 41 ಜನರು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನುಳಿದ 16 ಕೋವಿಡ್ ಸೋಂಕಿತ ರೋಗಿಗಳು ಸಕ್ರಿಯ ರೋಗಿಗಳಾಗಿದ್ದು, ಪರಿಣಾಮಕಾರಿಯಾದ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 5073 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 1705 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 3327 ಜನರು (1 ರಿಂದ 28 ದಿನಗಳ) ರಿರ್ಪೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 4 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 5595 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 3224 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 2310 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.


 

LEAVE A REPLY

Please enter your comment!
Please enter your name here