ವಿಜಯಪುರ: ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

0
118

ವಿಜಯಪುರ ಜೂ.12: ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಇಂದು ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತ ಸಂಚಾರಿ ವಾಹನ ಜಾಥಾಕ್ಕೆ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎನ್ ನಾಯಕ ಅವರು ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಿಲ್ಲಾದ್ಯಂತ ಈ ಸಂಚಾರಿ ವಾಹನ ಮೂಲಕ ಸಾಮಾಜಿಕ,ಭೌತಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಬಾಲ್ಯಾವಸ್ಥೆ ಕಾರ್ಮಿಕ ಪದ್ಧತಿಯ ಕುರಿತು ಧ್ವನಿವರ್ಧಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ, ಈ ಸಂಚಾರಿ ವಾಹನವು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಪಟ್ಟಣಗಳಲ್ಲಿ ದಿನಾಂಕ 12-06-2020 ರಿಂದ 20-06-2020 ರವರೆಗೆ ಆರು ದಿನಗಳ ಕಾಲ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ನಿಷೇಧ ನಿಯಂತ್ರಣ ಕಾಯ್ದೆ 1686ರ ಪ್ರಕಾರ 14 ವರ್ಷದ ಒಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 (1-18) ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ 6 ತಿಂಗಳಿಂದ ಕಡಿಮೆ ಇಲ್ಲದಂತೆ ಹಾಗೂ 2 ವರ್ಷದೊರೆಗೂ ವಿಧಿಸಬಹುದಾದಂತ ಕಾರಾಗೃಹ ಶಿಕ್ಷೆಯನ್ನು ಅಥವಾ 20 ಸಾವಿರಗಳಿಂದ ಕಡಿಮೆ ಇಲ್ಲದಂತೆ 50 ಸಾವಿರದ ವರೆಗೆ ದಂಡ ಅಥವಾ ಈ ಎರಡನ್ನು ವಿಧಿಸಲಾಗುತ್ತದೆ ಎಂದರು.

14 ವರ್ಷದೊಳಗಿನ ದುಡಿಯುವ ಮಕ್ಕಳು ಕಂಡು ಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಸಮಾಜಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ ಅಥವಾ ಕಾರ್ಮಿಕ ಇಲಾಖೆಗೆ ದೂರು ಸಲ್ಲಿಸಬಹುದಾಗಿದ್ದು, ಇಂತಹ ಮಕ್ಕಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಪೆನ್ಸಿಲ್ ಪೋರ್ಟಲ್ www.pencil.gov.in ನಲ್ಲಿ ದೂರು ಸಲ್ಲಿಸಬಹುದು. ಇದರ ಜೊತೆಗೆ ಪೊಲೀಸ್ ಇಲಾಖೆ 100, ಕಾರ್ಮಿಕ ಇಲಾಖೆ 250937/242778 ಗೆ, ಜಿಲ್ಲೆಯ ಎಲ್ಲಾ ತಾಲೂಕಾ ತಹಶಿಲ್ದಾರರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ಸಂವರಕ್ಷಣಾ ಘಟಕ ದೂ ಸಂ; 276354 ಗೆ, ಮಕ್ಕಳ ಸಹಾಯವಾಣಿ 1098 ಸೇರಿದಂತೆ ಜಿಲ್ಲಾಡಳಿತದ ದೂ.ಸಂ; 08352-220041 ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದ್ದು ನಾವೆಲ್ಲ ಒಟ್ಟುಗೂಡಿ ಬಾಲಕಾರ್ಮಿಕ ಪದ್ದತಿಯ ವಿರುದ್ದ ಹೋರಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ವೆಂಕಣ್ಣ ಹೊಸಮನಿ, ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಜಯಪುರ. ಸಿ.ಪ್ರಸನ್ನಕುಮಾರ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ವಿಜಯಪುರ. ಎಮ್.ಎಚ್ ಖಾಸನೀಸ್, ಅಧ್ಯಕ್ಷರು, ಜಿಲ್ಲಾ ನ್ಯಾಯವಾದಿಗಳ ಸಂಘ, ವಿಜಯಪುರ. ಶ್ರೀಧರ ಕುಲಕರ್ಣಿ, ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿ, ವಿಜಯಪುರ. ಸುನಂದಾ ತೋಳಬಂದಿ, ಜಿಲ್ಲಾ ಸಂಯೋಜಕರು, ಮಕ್ಕಳ ಸಹಾಯವಾಣಿ 1098, ವಿಜಯಪುರ. ಸದಾನಂದ ನಾಯಕ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಜಯಪುರ. ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಮಾಜಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಸಂವರಕ್ಷಣಾ ಘಟಕದ ಸಿಬ್ಬಂಧಿಗಳು ಉಪಸ್ಥಿತರಿದ್ದರು.


 

LEAVE A REPLY

Please enter your comment!
Please enter your name here