ಅನೈತಿಕ ಸಂಬಂಧ: ಇಸ್ಪೇಟ ಆಡಲು ಕರೆದು ಕೊಲೆಗೈದ

0
167

ಕೋಲಾರ: ಜೂ.16: ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಮುಳಬಾಗಿಲು ನಗರದ ಪಳ್ಳಿಗರ ಪಾಳ್ಯದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ನಾಗರಾಜ್ (35) ಕೊಲೆಯಾದ ವ್ಯಕ್ತಿ. ಆರೋಪಿ ಅಪ್ಪಿ ಎಂಬಾತ ಕೊಲೆ ಮಾಡಿದ ಆರೋಪಿ.

ಆರೋಪಿ ಅಪ್ಪಿ ಪತ್ನಿ ಜೊತೆ ಮೃತ ನಾಗರಾಜ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಕೇಳಿಬರುತ್ತಿದೆ. ರಾತ್ರಿ ವೇಳೆ ಇಸ್ಪೇಟ್ ಆಡುವಾಗ ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ಹೋಗಿ ಆರೋಪಿ ಅಪ್ಪಿ ನಾಗರಾಜನನ್ನು ಕೊಲೆ ಮಾಡಿದ್ದಾನೆ.

ಮುಳಬಾಗಿಲು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮುಳಬಾಗಿಲು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 

LEAVE A REPLY

Please enter your comment!
Please enter your name here