ವಿಜಯಪುರ: ಮಾಸ್ಕ್ ದಿನಾಚರಣೆ

0
94

ವಿಜಯಪುರ ಜೂನ್ 18: ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕರಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡುವ ದೆಸೆಯಲ್ಲಿ ಇಂದು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಾಸ್ಕ್ ದಿನಾಚರಣೆಯನ್ನು ಆಚರಿಸಲಾಯಿತು.

ಇಂದು ನಗರದ ಗಾಂಧಿ ವೃತ್ತದಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಮತ್ತು ಕರಪತ್ರ ಹಂಚುವ ಕಾರ್ಯಕ್ಕೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸೋಪಿನಿಂದ ಕೈತೊಳೆಯುವ ಕುರಿತಂತೆ ಜಾಥಾ ಮೂಲಕ ಗಾಂಧಿ ವೃತ್ತದಿಂದ ಡಾ. ಬಿ.ಆರ್ ಅಂಭೇಡ್ಕರ್ ವೃತ್ತದ ವರೆಗೆ ಕಾಲ್ನಡಿಗೆ ಮೂಲಕ ಸಾರ್ವಜನಿಕರಲ್ಲಿ ಕೊರೊನಾ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿ ಬಳಗದವರು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹೇಂದ್ರ ಕಾಪ್ಸೆ, ಜಿಲ್ಲಾಸ್ಪತ್ರೆ ಸರ್ಜನ್ ಶರಣಪ್ಪ ಕಟ್ಟಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ.ಬಿ ಬಿರಾದಾರ, ಡಾ. ಧಾರವಾಡಕರ, ಡಾ. ಸಂಪತಕುಮಾರ ಗುಣಾರೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


 

LEAVE A REPLY

Please enter your comment!
Please enter your name here