ಅತ್ಯಾಚಾರಕ್ಕೆ ಸ್ನೇಹಿತನಿಗೆ ಸಹಾಯ ಮಾಡಿದ ಪತಿರಾಯ ಕಾವಲುಗಾರನಾದ

0
90
ಸಾಂಧರ್ಭಿಕ ಚಿತ್ರ

ಜೈಪುರ ಜೂನ್.19: ತನ್ನ ಪತ್ನಿ ಮೇಲೆ ಅತ್ಯಾಚಾರಕ್ಕೆ ಸ್ನೇಹಿತನಿಗೆ ಸಹಾಯ ಮಾಡಿದ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಶಹಜಹಾನ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ತನ್ನ ಪತ್ನಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದರೆ ಅದನ್ನು ತಪ್ಪಿಸುವುದನ್ನು ಬಿಟ್ಟು ಪತಿ ಮಹಾಶಯ ಹೊರಗಡೆ ಲಾಠಿ ಹಿಡಿದು ಕಾವಲು ಕಾಯುತ್ತಿದ್ದ ವಿಲಕ್ಷಣ ಕೃತ್ಯ ಬೆಳಕಿಗೆ ಬಂದಿದೆ.

ಹೆಂಡತಿಯನ್ನು ಮಾರುಕಟ್ಟೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ದಾರಿಯಲ್ಲಿ ಆರೋಪಿ ತನ್ನ ಸ್ನೇಹಿತ ಮಿಚ್ಚು ಅಲಿಯಾಸ ಬಲ್ವಂತ್ ಧಾನಕ್ ತನ್ನೊಂದಿಗೆ ಬರಲು ಕೇಳಿಕೊಂಡಿದ್ದಾನೆ. ನಿರ್ಜನ ಪ್ರದೇಶದಲ್ಲಿ ಪತಿ ಮಹಾಶಯ ಬೈಕ್ ನಿಲ್ಲಿದ್ದನು. ಬೈಕಿನಿಂದ ಇಳಿದು ಸ್ವಲ್ಪ ಸಮಯ ಅಲ್ಲೇ ಕುಳಿತ್ತಿದ್ದೆವು. ಆಗ ಧಾನಕ್ ಬಂದು ನನ್ನನ್ನು ಹತ್ತಿರದಲ್ಲಿದ್ದ ರೂಮಿಗೆ ಎಳೆದುಕೊಂಡು ಹೋಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನನ್ನ ಮೇಲೆ ಅತ್ಯಾಚಾರ ನಡೆಯುತ್ತಿದ್ದಾಗ ನನ್ನ ಪತಿ ಲಾಠಿ ಹಿಡಿದು ರೂಮಿನ ಹೊರಗೆ ಕಾವಲು ನಿಂತಿದ್ದ. ಸ್ನೇಹಿತ ತನ್ನ ಮೇಲೆ ಅತ್ಯಾಚಾರ ನಡೆಸಲು ಪತಿಯೇ ಸಂಚು ರೂಪಿಸಿದ್ದ ಎಂದು ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಅಲ್ಲದೇ ಸಂತ್ರಸ್ತೆ ಮಹಿಳೆಗೆ ಈ ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಇಬ್ಬರೂ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ತಿಳಿಸಿದ್ದಾಳೆ. ಆರೋಪಿ ಹಾಗೂ ಪತಿ ಇಬ್ಬರನ್ನೂ ಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


 

LEAVE A REPLY

Please enter your comment!
Please enter your name here