ವಿಜಯಪುರ: ಒಟ್ಟು 34 ಕಂಟೇನ್ಮೆಂಟ್ ವಲಯಗಳು ಚಾಲ್ತಿಯಲ್ಲಿವೆ; ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

0
208

ವಿಜಯಪುರ ಜೂನ್ 23: ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಮಾತನಾಡಿ ಜಿಲ್ಲೆಯಲ್ಲಿ ಈವರೆಗೆ 301 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು, 74 ಜನರು ಸಕ್ರೀಯ ರೋಗಿಗಳಾಗಿದ್ದಾರೆ. ಈವರೆಗೆ 26,612 ಜನರ ಗಂಟಲುದ್ರವ ಮಾದರಿ ನೆಗೆಟಿವ್ ಬಂದಿದ್ದು, 26,989 ಲಕ್ಷಣವುಳ್ಳ ಜನರ ಗಂಟಲು ದ್ರವ ಮಾದರಿ ವೈದ್ಯಕೀಯ ಪರೀಕ್ಷೆಗೆ ಸಂಗ್ರಹಿಸಲಾಗಿದೆ.

ಹೋಮ್ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ 22 ಜನರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಅದರಂತೆ ಜಿಲ್ಲೆಯ ಗಡಿಭಾಗ ಕಂಟೇನ್ಮೆಂಟ್ ವಲಯ ಮತ್ತು ಇತರೆ ಪ್ರದೇಶಗಳಲ್ಲಿ ಕಾನೂನಿನ ರಿತ್ಯ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ .

-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್

12,808 ಜನರು 28 ದಿನಗಳ ಐಸೊಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. 21,097 ಜನರು 1 ರಿಂದ 28 ದಿನಗಳ ರಿಪೊರ್ಟಿಂಗ್ ಅವಧಿಯಲ್ಲಿದ್ದಾರೆ. ಈವರೆಗೆ 220 ಗುಣಮುಖ ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿಲಾಗದೆ. 7 ಜನರು ಕೋವಿಡ್ ಪಾಸಿಟಿವ್ ರೋಗಿಗಳು ಮೃತಪಟ್ಟಿದ್ದು, 34,132 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 34 ಕಂಟೇನ್ಮೆಂಟ್ ವಲಯಗಳು ಚಾಲ್ತಿಯಲ್ಲಿದ್ದು, 42 ವಲಯಗಳನ್ನು ಡಿನೋಟಿಫಿಕೆಶನ್ ಮಾಡಲಾಗಿದೆ. ಈ ಹಿಂದೆ ಒಟ್ಟು 76 ಕಂಟೆನ್ಮೆಂಟ್ ವಲಯಗಳನ್ನು ಗುರುತಿಸಲಾಗಿತ್ತು ಎಂದರು.

ಜಿಲ್ಲೆಯಲ್ಲಿ ಒಟ್ಟು 596 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದ 32,340 ಜನರ ಪೈಕಿ 30,785 ಜನರನ್ನು ಬಿಡುಗಡೆ ಮಾಡಲಾಗಿದೆ. ಸಧ್ಯಕ್ಕೆ 66 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳು ಚಾಲ್ತಿಯಲ್ಲಿದ್ದು, 1,567 ಜನರು ಸಾಂಸ್ಥಿಕ ಕ್ವಾರಂಟೈನ್‍ದಲ್ಲಿದ್ದಾರೆ. ಈವರೆಗೆ 23,826 ಮಹಾರಾಷ್ಟ್ರ ರಾಜ್ಯದಿಂದ ಹಾಗೂ 2,982 ಗೋವಾ ರಾಜ್ಯದಿಂದ ಮತ್ತು 8,514 ಜನರು ಬೇರೆ ರಾಜ್ಯಗಳಿಂದ ಆಗಮಿಸಿದ್ದಾರೆ. ಅದರಂತೆ ವೈದ್ಯರು ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಇತ್ತಿಚ್ಚಿಗೆ ಅವಳಿ ಮಕ್ಕಳಿಗೆ ಹೆರಿಗೆ ನೀಡಿದ ಮಹಿಳೆಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದರು.


 

ambedkar image

LEAVE A REPLY

Please enter your comment!
Please enter your name here