ವಿಜಯಪುರ: ಇಂದು 4 ಕೋವಿಡ್-19 ಪಾಸಿಟಿವ್ ದೃಢ

0
189

ವಿಜಯಪುರ ಜೂ.24 : ಜಿಲ್ಲೆಯಲ್ಲಿ ಈವರೆಗೆ ಒಟ್ಟು 321 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯಲ್ಲಿ 82 ರೋಗಿಗಳು ಕೋವಿಡ್-19 ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ. ಇಂದು ಮತ್ತೆ 4 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲೆಯ ಸೋಂಕಿತರಲ್ಲಿ ರೋಗಿ ಸಂಖ್ಯೆ 9722 (24 ವರ್ಷದ ಹೆಣ್ಣು) ರೋಗಿ ಸಂಖ್ಯೆ 9723 (27 ವರ್ಷದ ಹೆಣ್ಣು) ಐಎಲ್‍ಐ ಸಂಪರ್ಕದಿಂದ ರೋಗಿ ಸಂಖ್ಯೆ 9274 (58 ವರ್ಷದ ಗಂಡು) ರೋಗಿ ಸಂಖ್ಯೆ 9725 (21 ವರ್ಷದ ಗಂಡು) ಮಹಾರಾಷ್ಟ್ರ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 34202 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಇಲ್ಲಿಯವರೆಗೆ ಒಟ್ಟು 321 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. 20343 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 13620 ಜನರು (1 ರಿಂದ 28 ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 7 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 232 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 82 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 26973 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 26596 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 56 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.


 

ambedkar image

LEAVE A REPLY

Please enter your comment!
Please enter your name here