ವಿಜಯಪುರ: ಮಾಜಿ ಶಾಸಕರೊಬ್ಬರಿಗೆ ಕೊರೋನಾ ಸೋಂಕು

0
82

ವಿಜಯಪುರ ಜೂನ್ 26 : ಜಿಲ್ಲೆಯ ಮಾಜಿ ಶಾಸಕರೊಬ್ಬರಿಗೆ (ರೋಗಿ ಸಂಖ್ಯೆ-10654 ಹಾಗೂ ವಯೋಮಾನ 72 , ಪುರುಷ) ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಮಾಜಿ ಶಾಸಕರಿಗೆ ಕೋವಿಡ್-19 ಲಕ್ಷಣವಿರುವದನ್ನು ಗಮನಿಸಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿ ಗಂಟಲು ದ್ರವ ಮಾದರಿಯನ್ನು ಪಡೆದು ವ್ಯದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೂಕ್ತ ಚಿಕಿತ್ಸೆಯನ್ನು ಸಹ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


 

LEAVE A REPLY

Please enter your comment!
Please enter your name here