ರಾಜೀವಗಾಂಧಿ ಹಾಗೂ ದೇವರಾಜ ಅರಸ ಅವರ ಜನ್ಮ ದಿನಾಚರಣೆ

0
184

ವಿಜಯಪುರ : ಮಾಜಿ ಪ್ರಧಾನಿ ರಾಜೀವಗಾಂಧಿ ಹಾಗೂ ದೇವರಾಜ ಅರಸ ಅವರ ಜನ್ಮ ದಿನಾಚರಣೆ ನಿಮಿತ್ತ ಇಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ವಿವಿಧ ಬಡಾವಣೆಗಳಲ್ಲಿ ಸಸಿ ನೆಡುವ ಮೂಲಕ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಎಐಸಿಸಿ ಸದಸ್ಯರು ಹಾಗೂ ಕಾಂಗ್ರೆಸ್ ಯುವ ಮುಖಂಡರಾದ ಶ್ರೀಮತಿ ಶ್ರೀದೇವಿ ಉತ್ಲಾಸರ ಮಾತನಾಡಿ, ಮಾಹಿತಿ ತಂತ್ರಜ್ಞಾನ, ಟೆಲಿಕಾಂ ಕ್ರಾಂತಿ, ಪಂಚಾಯತ ರಾಜ, ಮತದಾನದ ವಯಸ್ಸಿನ ಇಳಿಕೆ ಸೇರಿದಂತೆ ಮಹತ್ತರ ಬಲಿಷ್ಟವಾದ ಭಾರತವನ್ನು ಕಟ್ಟುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ. ಆಧುನಿಕ ಭಾರತವನ್ನು ಕಟ್ಟುವಲ್ಲಿ ಇವರ ಶ್ರಮ ಬಹಳಷ್ಟಿದೆ. ಮಾಜಿ ಪ್ರಧಾನಿ ರಾಜೀವ ಗಾಂಧಿ ಯವರು ಕಂಡ ಕನಸ್ಸನ್ನು ನನಸುಮಾಡುವಲ್ಲಿ ನಾವೆಲ್ಲರು ಒಗ್ಗಾಟ್ಟಾಗಿ ಶ್ರಮಿಸಬೇಕಿದೆ ಎಂದರು.

ಭೂ ಸುಧಾರಣೆ ಕಾಯ್ದೆ, ಉಳುವವನೆ ಭೂಮಿಯ ಒಡೆಯ ಎನ್ನುವ ಮಹತ್ತರವಾದ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಮಾಜಿ ಮುಖ್ಯಮಂತ್ರಿ, ದೀನ ದಲಿತರ ಆಶಾಕಿರಣ ದಿ. ದೇವರಾಜ ಅರಸು ಅವರ ಕಾರ್ಯ ಶ್ಲಾಘನೀಯವಾದದ್ದು, ಅವರದಾರಿಯಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ. ಅವರ ಆದರ್ಶವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದುರು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಖಾದರ, ಪ್ರಧಾನ ಕಾರ್ಯದರ್ಶಿ ಮುನೀರ್ ಕಾಲೇಬಾಗ, ಅನೀತಾ ಭಜಂತ್ರಿ, ಶ್ವೇತಾ ಜಲಜಿ, ಸವಿತಾ ನಾಟೀಕಾರ ಪದಾಧಿಕಾರಿಗಳಾದ ಆಸೀಪ್ ಪಟೇಲ, ಇಮ್ರಾನ ಅಜೀಂ, ಲತೀಪ್, ಅಸೀಪ್, ಸೋಹೇಲ ಶೇಖ, ರಿಯಾಜ ಹಂಗರಗಿ, ಸಮೀರ ಮುಲ್ಲಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.


 

LEAVE A REPLY

Please enter your comment!
Please enter your name here