ಮಾಜಿ ರಾಷ್ಟ್ರಪತಿ, ಆರ್ಥಿಕ ತಜ್ಞ ಪ್ರಣಬ್ ಮುಖರ್ಜಿ ವಿಧಿವಶ

0
226
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ದೆಹಲಿ ಆಗಸ್ಟ್‌ 11. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  84 ವರ್ಷದ ಪ್ರಣಬ್ ಮುಖರ್ಜಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ  ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ (Blood clot) ಸಮಸ್ಯೆ ಉದ್ಭವವಾಗಿತ್ತು. ಹೀಗಾಗಿ ಪ್ರಣಬ್ ಅವರಿಗೆ ತುರ್ತಾಗಿ ಮಿದುಳು ಚಿಕಿತ್ಸೆಯನ್ನು ಮಾಡಲಾಗಿತ್ತು.

ಮಿದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿತ್ತು. ಆದರೂ ಮಿದುಳು ಶಸ್ತ್ರ ಚಿಕಿತ್ಸೆಯನ್ನು ಮುಗಿಸಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್ ಸಪೋರ್ಟ್) ಮಾಡುವ ಮೂಲಕ ತೀವ್ರ ನಿಗಾ ವಹಿಸಲಾಗಿತ್ತು. ಈ ವೇಳೆ ಅವರು ಶಾಶ್ವತ ಕೋಮಾಕ್ಕೆ ಜಾರಿದ್ದರು. ಆದರೆ, ಎಷ್ಟೇ ಪ್ರಯತ್ನ ನಡೆಸಿದರು ಪ್ರಣಬ್‌ ಮುಖರ್ಜಿ ಚಿಕಿತ್ಸೆಗೆ ಸ್ಪಂದಿಸಿಲ್ಲ. ಹೀಗಾಗಿ ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012 ರಿಂದ 2017 ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಗಳಾಗುವ ಮುನ್ನ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಅವರು ರಾಷ್ಟ್ರಪತಿ ಅಧಿಕಾರ ಪೂರ್ಣಗೊಂಡ ಬಳಿಕ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದರು.


 

ambedkar image

LEAVE A REPLY

Please enter your comment!
Please enter your name here