ಮುಂದಿನ ಸಿಎಂ ಉತ್ತರ ಕರ್ನಾಟಕದವರೇ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ

0
151
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ ಅ.20: ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪನವರು ಬಹಳ ದಿನ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವುದಿಲ್ಲ,

ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಈಗಗಾಲೇ ಕೇಂದ್ರ ಸರಕಾರಕ್ಕೂ ಯಡಿಯೂರಪ್ಪ ಸಾಕಾಗಿ ಹೋಗಿದ್ದಾರೆ. ನನ್ನ ಕ್ಷೇತ್ರದ 125 ಕೋಟಿ ಅನುದಾನವನ್ನು ಸಿಎಂ ಯಡಿಯೂರಪ್ಪ ಕಡಿತ ಮಾಡಿದ್ದಾರೆ. ನನಗೂ ಯಡಿಯೂರಪ್ಪನವರಿಗೂ ಜಗಳವಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿ. ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ಕಳುಹಿಸುತ್ತಾರೆ. ಮುಂದಿನ ಬಾರಿ ಉತ್ತರ ಕರ್ನಾಟಕದವರನ್ನೇ ಮುಖ್ಯಮಂತ್ರಿಯವರನ್ನಾಗಿ ಮಾಡುವುದಾಗಿ ಪ್ರಧಾನಿ ಮೋದಿ ಕೂಡ ಭರವಸೆ ನೀಡಿದ್ದಾರೆ ಎಂದು ಹೇಳಿದರು.


 

LEAVE A REPLY

Please enter your comment!
Please enter your name here