ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ ಚೆನ್ನಮ್ಮ

0
105

ವಿಜಯಪುರ ಅ.23: ನಗರದ ಶ್ರೀ ಸಿದ್ದೇಶ್ವರ ಕಲಾ ಭವನದಲ್ಲಿ ವೀರ ಮಾತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು. ಚನ್ನಮ್ಮ ವಿದ್ಯಾವರ್ಧಕ ಸಂಘ ಉತ್ನಾಳ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಬಾಗೇವಾಡಿ ಮಾತನಾಡಿ ವೀರ ಮಾತೆ ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಕಿತ್ತೂರು ಸಂಸ್ಥಾನವನ್ನು ಉಳಿಸಿದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಿತ್ತೂರು ರಾಣಿ ಚನ್ನಮ್ಮ ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ನಮ್ಮ ಕರುನಾಡಿನ ಕೀರ್ತಿ ಎಂದು ಪರಮ ಪೂಜ್ಯ ವಿರೇಶ್ವರ ಮಹಾಸ್ವಾಮಿಗಳು ಚೆನ್ನಮ್ಮಳ ಕುರಿತು ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.ಜಿಲ್ಲಾ ಪ್ರಶಸ್ತಿ 19 ಜನರಿಗೆ, ರಾಜ್ಯಪ್ರಶಸ್ತಿ 18 ಜನರಿಗೆ, ರಾಷ್ಟ್ರಮಟ್ಟದ ಪ್ರಶಸ್ತಿ 15 ಜನರಿಗೆ, ಜೀವಮಾನ ಸಾಧನೆ ಪ್ರಶಸ್ತಿ 6 ಜನರಿಗೆ ಪ್ರಶಸ್ತಿಯನ್ನು ನೀಡಿ ಎಲ್ಲ ಸಾಧಕರಿಗೆ ಸನ್ಮಾನಿಸಲಾಯಿತು.


 

LEAVE A REPLY

Please enter your comment!
Please enter your name here