ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ: ಸಿಎಂ ಯಡಿಯೂರಪ್ಪ

0
157

ಬೆಂಗಳೂರು ನ.06: ರಾಜ್ಯ ಸರ್ಕಾರ ಈ ಬಾರಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಕುರಿತು ಮಾಹಿತಿ ನೀಡಿ, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಾಟಿಕಿ ಮಾರಾಟ ಹಾಗೂ ಹಚ್ಚುವಿಕೆಯನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದರು.

ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ, ಕೊರೊನಾದಂತಹ ಈ ಸಂದರ್ಭದಲ್ಲಿ ಪಟಾಕಿಯಿಂದ ಇನ್ನಷ್ಟು ಆರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಹಾಗಾಗಿ ತಜ್ಞರ ಜೊತೆ ಆರೋಗ್ಯ ಇಲಾಖೆ ಅಧಿಕಾರಿಗಳು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದ್ದು, ಇದೀಗ ಅಂತಿಮವಾಗಿ ದೀಪಾವಳಿ ವೇಳೆ ಪಟಾಕಿ ನಿಷೇಧಕ್ಕೆ ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.


 

LEAVE A REPLY

Please enter your comment!
Please enter your name here