‘ನಿವಾರ್ ಸೈಕ್ಲೋನ್’ ರೆಡ್ ಅಲರ್ಟ್

0
183

ಮೈಸೂರು ನ.25: ನಿವಾರ್ ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿ ದಾಟಿ ಬರುವ ಮುನ್ಸೂಚೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಬಂಧಪಟ್ಟ ಅಧಿಕಾರಿಗಳಿಗೆ ಮುನ್ನೇಚರಿಕಾ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ‘ನಾವು ಚಂಡಮಾರುತವನ್ನು ನಿಲ್ಲಿಸಬಹುದೇ ? ಸಾಧ್ಯವಿಲ್ಲ . ಗರಿಷ್ಕ ಹಾನಿಗಳನ್ನು ತಪ್ಪಿಸಲು ತಡೆಗಟ್ಟುವ ಕ್ರಮ ಕೈಗೊಳ್ಳುವ ಕೆಲಗಳನ್ನು ಮಾಡಬಹುದು , ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇದೇ ವೇಳೆ ಕ್ಯಾಬಿನೆಟ್ ವಿಸ್ತರಣೆ ಸಂಬಂಧಿಸಿದಂತೆ ಇನ್ನೂ ಎರಡು ಮೂರು ದಿನಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು. ನಿಗಮ ಮಂಡಳಿ ನೇಮಕಾತಿ ಕುರಿತು ಮಾತನಾಡಿ, 5 ರಾಜ್ಯ ಮಂಡಳಿಗಳು ಮತ್ತು ನಿಗಮಗಳಿಗೆ ಹೆಚ್ಚಿನ ಅಧ್ಯಕ್ಷರನ್ನು ನೇಮಿಸಲು ಯೋಜಿಸುತ್ತಿದ್ದೇವೆ. ಸಂಜೆಯ ವೇಳೆಗೆ ಆದೇಶ ಹೊರಡಿಸಲಾಗುವುದು ಮತ್ತು ಅರ್ಹ ಅಭ್ಯರ್ಥಿಗಳಿಗೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.


LEAVE A REPLY

Please enter your comment!
Please enter your name here