ಬಾಗಲಕೋಟೆ ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ

0
330

ಬಾಗಲಕೋಟೆ ನ.26: ಜಿಲ್ಲಾಡಳಿತದ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.

ವ್ಯಕ್ತಿಗೌರ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕು. ನಮ್ಮ ಸಂವಿಧಾನ ಸಭೆಯಲ್ಲಿ 1949ನೇ ನವೆಂಬರ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಿಸಲಾಯಿತು.

ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹಾಂತೇಶ ಪೋತದಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಗದವರು ಉಪಸ್ಥಿತರಿದ್ದರು.


ambedkar image

LEAVE A REPLY

Please enter your comment!
Please enter your name here