ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ : ನಾಲ್ವರು ಪೊಲೀಸರ ವಶಕ್ಕೆ

0
128

ಬೆಂಗಳೂರು ಡಿ.17: ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀ ತಂದೆ ನೀಡಿದ ದೂರಿನ ಆಧಾರದ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್ ಪಿ ಲಕ್ಷ್ಮಿ ಸ್ನೇಹಿತರಾದ ಮನು, ಪ್ರಜ್ವಲ್ ಸೇರಿದಂತೆ ನಾಲ್ವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನು ಹಾಗೂ ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಲಕ್ಷ್ಮೀ ತಂದೆ ವೆಂಕಟೇಶ್, ಪ್ರಕರಣದ ಹಿಂದೆ ಅನುಮಾನವಿದೆ. ಆಕೆ ಸ್ನೇಹಿತರು ಹೇಳುವಂತೆ ಕಿಟಕಿಗೆ ನೇಣು ಬಿಗಿದುಕೊಂಡಿದ್ದರು ಎಂದಿದ್ದಾರೆ. ಅಲ್ಲದೇ ಆಕೆ ತನ್ನ ಮನೆಯನ್ನು ಬಿಟ್ಟು ಬೇರೆಯವರ ಮನೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಕಾರಣ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದರು.


 

LEAVE A REPLY

Please enter your comment!
Please enter your name here