ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ವೇಳಾಪಟ್ಟಿ ಶೀಘ್ರ ಪ್ರಕಟಿಸಲಾಗುವುದು; ಸಚಿವ ಸುರೇಶ ಕುಮಾರ

0
102

ಬೆಂಗಳೂರು ಜ.01: 2020-2021ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ರಾಜ್ಯಸರಕಾರ ಟೆಂಟೆಟಿವ್ ವೇಳಾಪಟ್ಟಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಮಾಹಿತಿ ನೀಡಿದ್ದಾರೆ.

ಮಕ್ಕಳಿಗೆ ಓದುವುದಕ್ಕೆ ಸಾಕಷ್ಟು ಸಮಯಾವಕಾಶ ಇರುವಂತೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈಗ ಪ್ರಕಟಿಸಲಾಗುವ ವೇಳಾಪಟ್ಟಿಯೇ ಅಂತಿಮವೂ ಆಗಬಹುದು ಅಥವಾ ಅಲ್ಪಸ್ವಲ್ಪ ಮಾರ್ಪಾಟಾಗಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸುರೇಶ ಕುಮಾರ ಶಾಲೆ ನಡೆಸುವುದಕ್ಕೆ ಮಾಡಿಕೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಕುರಿತು ಸಚಿವರನ್ನು ಪ್ರಶ್ನಿಸಿದರು.

ಪರೀಕ್ಷೆ ಕುರಿತು ಯಾರೂ ಆತಂಕ ಪಡಬೇಕಾಗಿಲ್ಲ. ಓದುವುದಕ್ಕೆ ಸಾಕಷ್ಟು ಸಮಯಾವಕಾಶ ಇರುವಂತೆ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.


LEAVE A REPLY

Please enter your comment!
Please enter your name here