ಜ.30 ರಂದು ಉದ್ಯೋಗ ಮೇಳ

0
209

ವಿಜಯಪುರ : ಜ.27: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ವಿಜಯಪುರ, ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಖಾಸಗಿ ಕ್ಷೇತ್ರದಲ್ಲಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗಾಗಿ ದಿನಾಂಕ : 30-01-2021 ರಂದು ಬೆಳಿಗ್ಗೆ 09-00 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಆಶ್ರಮ ರೋಡ್ ಹತ್ತಿರದ ಬಿ.ಎಲ್.ಡಿ.ಇ ಪಾಲಿಟೆಕ್ನಿಕ್ ಕಾಲೇಜನಲ್ಲಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿರುತ್ತದೆ ಎಂದು ವಿಜಯಪುರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ (ಇಂಜಿನೀಯರಿಂಗ್ ಪದವಿ ಹೊರತುಪಡಿಸಿ) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗಾಗಿ ಈ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ವಿಜಯಪುರ. ದೂ.ಸಂ : 08352-250383 ಸಂಪರ್ಕಿಸಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ambedkar image

LEAVE A REPLY

Please enter your comment!
Please enter your name here