ನಗರದಲ್ಲಿನ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಗಳ ಪರಿಶೀಲನೆ

0
91

ವಿಜಯಪುರ :ಫೆ 6: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ : 22 ಮತ್ತು 14 ರಲ್ಲಿನ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಇಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಪರಿಶೀಲನೆ ನಡೆಸಿದರು.
ನಗರದ ವಾರ್ಡ್ 22 ರಲ್ಲಿ ನಿರ್ಮಿಸಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಜೊತೆಗೆ ಅಧಿಕೃತ ಪ್ರಯೋಗಾಲಯದಿಂದ ವರದಿ ಪಡೆದು ಗೊಬ್ಬರ ಮಾರಾಟ ಮಾಡುವಂತೆ ಸೂಚನೆ ನೀಡಿದರು.

ನಂತರ ವಾರ್ಡ್ ನಂ -14 ರ ಡಾಲರ್ಸ್ ಕಾಲನಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಘಟಕ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀ ಡಿ.ಎಚ್ ಕಿರೇಸೂರ, ಡಿಯುಡಿಸಿ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಎಸ್.ಎಸ್.ಸುರ್ಖಿ, ಪರಿಸರ ಅಭಿಯಂತರ ಡಾ.ಪ್ರಕಾಶ ಗೂಳಪ್ಪಗೊಳ, ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here