ಪಂಚರಾಜ್ಯಗಳಲ್ಲಿ ಬಿಎಸ್ಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

0
59

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯವರು ಮುಂಬರುವ ಪಂಚರಾಜ್ಯ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ಯಾರೊಂದಿಗು ಮೈತ್ರಿ ಮಾಡಿಕೊಳ್ಳದೇ ಸ್ಪರ್ಧಿಸಲಿದೆ ಎಂದು  ತಿಳಿಸಿದ್ದಾರೆ.

ಅಸ್ಸಾಂ ಹೊರತು ಪಡಿಸಿ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಮತ್ತು ಪುದುಚೇರಿಯಲ್ಲಿ ಈ ಚುನಾವಣೆಯಲ್ಲಿ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕಹಿ ಅನುಭವಿಸಿದ್ದೇವೆ. ಮುಂದಿನ ವರ್ಷ ನಡೆಯಲಿರುವ ಯುಪಿ ವಿಧಾನಸಭಾ ಚುನಾವಣೆಯಲ್ಲಿಯೂ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಕಾನ್ಸಿರಾಮ್ ಅವರ 87 ನೇ ಜನ್ಮ ದಿನಾಚರಣೆಯಂದು ಗೌರವ ಸಲ್ಲಿಕೆ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.


LEAVE A REPLY

Please enter your comment!
Please enter your name here