ಸಂಸದರು ಮತ್ತು ಶಾಸಕರು ತಮ್ಮತಮ್ಮ ಕ್ಷೇತ್ರಗಳಲ್ಲಿ ಉಳಿಯುವಂತೆ ಸಿಎಂ ಮನವಿ

0
131
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು ಮೇ 10: ಕೋವಿಡ್ ಸೋಂಕಿನ ಪ್ರಭಾವವನ್ನು ನಿಯಂತ್ರಿಸಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮತಮ್ಮ ಕ್ಷೇತ್ರಗಳಲ್ಲಿ ಉಳಿಯಬೇಕು. ಕಠಿಣ ನಿಯಮ ಜಾರಿಯಾಗಿರುವ ಬಗ್ಗೆ ಖಚಿತಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.

ಇಂದು ಟ್ವೀಟ್ ಮೂಲಕ ಮನವಿ ಮಾಡಿರುವ ಸಿಎಂ, ಈ ನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಬೇಕು ಎಂದಿದ್ದಾರೆ. ಮಾರ್ಗಸೂಚಿಗಳನ್ನು ತಪ್ಪದೆ ಅನುಸರಿಸಿ ಸೋಂಕು ನಿಯಂತ್ರಿಸಲು ಸರ್ಕಾರದೊಂದಿಗೆ ಸಹಕರಿಸಿ ಎಂದು ಸಿಎಂ ಮನವಿ ಮಾಡಿದ್ದಾರೆ.


LEAVE A REPLY

Please enter your comment!
Please enter your name here