ಲಾಕ್‌ ಡೌನ್‌ ಯಶಸ್ವಿಗೆ ಜನರ ಸಹಕಾರ ಅಗತ್ಯ : ಸಚಿವ ಬಸವರಾಜ ಬೊಮ್ಮಾಯಿ

0
66
ಬಸವರಾಜ ಬೊಮ್ಮಾಯಿ

ಬೆಂಗಳೂರು ಮೇ 11: ಬಲಪ್ರಯೋಗದ ಮಾಡದೆ ಲಾಕ್ಡೌನ್ ಯಶಸ್ವಿಯಾಗಬೇಕಾದರೆ ಜನರ ಸಹಕಾರ ಮುಖ್ಯವಾಗಿ ಬೇಕು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಪಶು ಮಹಾವಿದ್ಯಾಲಯದಲ್ಲಿನ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಲಪ್ರಯೋಗ ಮಾಡದೇ ಲಾಕ್ಡೌನ್ ಯಶಸ್ವಿಗೊಳಿಸಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ ಲಾಠಿ ಪ್ರಹಾರ ಮಾಡದಂತೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಕರ್ನಾಟಕದ ಜನತೆ ಸರಿಯಾಗಿ 14 ದಿನಗಳ ನಿಯಮಗಳನ್ನು ಪಾಲಿಸಿದರೆ ಕೋವಿಡ್ ನಿಯಂತ್ರಣ ಸಾಧ್ಯ. ಜನರ ಸಹಕಾರ ಅತಿ ಮುಖ್ಯವಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಬಲಪ್ರಯೋಗ ಮಾಡಲಾರದೆ ವಾಹನ ಸೀಜ್ ಮಾಡುವುದು ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಲಾಠಿ ಪ್ರಹಾರ ನಡೆಸದಂತೆ ಸರ್ಕಾರದಿಂದ ಸೂಚನೆ ನೀಡಲಾಗಿತ್ತು. ಇದೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿಯೂ ಲಾಠಿ ಚಾರ್ಜ್‌ ನಡೆಸದಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.


 

LEAVE A REPLY

Please enter your comment!
Please enter your name here