ವಿಜಯಪುರದಲ್ಲಿ 20 ಕ್ಕೂ ಹೆಚ್ಚು ಬ್ಯ್ಲಾಕ್‌ ಫಂಗಸ್‌ ಪ್ರಕರಣಗಳು ಪತ್ತೆ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

0
168

ವಿಜಯಪುರ ಮೇ 18: ಬ್ಲಾಕ್ ಫಂಗಸ್ ಕಾಯಿಲೆ ವಿಜಯಪುರ ಜಿಲ್ಲೆಗೂ ಕಾಲಿಟ್ಟಿದೆ. ಸದ್ಯ ಜಿಲ್ಲೆಯಲ್ಲಿ ಭ್ಲ್ಯಾಕ್ ಫಂಗಸ್ 20 ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರದ ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹೆಚ್ಚು ಪ್ರಕರಣಗಳಿರುವ ಸಾಧ್ಯತೆ ಇದೆ ಎಂದು ಅಂದಾಜಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಇನ್ನೂ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಅಂಥ ಪ್ರಕರಣ ಕಂಡು ಬಂದರೆ ಅಲ್ಲಿಯೂ ಪ್ರತ್ಯೇಕ ವಾರ್ಡ್ ಮಾಡುವ ಯೋಚನೆ ಇದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಬ್ಯ್ಲಾಕ್‌ ಫಂಗಸ್‌ ಪ್ರಕರಣಗಳು ನಗರದಲ್ಲಿ ಪತ್ತೆಯಾಗುತ್ತಿದ್ದು, ಇದರಿಂದ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ.


LEAVE A REPLY

Please enter your comment!
Please enter your name here