ತಾಯಿ, ಮಗ ಹಾಗೂ ಪ್ರಿಯಕರನಿಂದ ಹತ್ಯೆಯಾಗಿದ್ದ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮೂವರೂ ದೋಷಿಗಳೆಂದು ತೀರ್ಪು ನೀಡಿದ ಉಡುಪಿ ಕೋರ್ಟ್‌

0
190
ಬಾಸ್ಕರ್‌ ಶೆಟ್ಟಿ, ಉದ್ಯಮಿ

ಉಡುಪಿ: ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಸ್ವಾರ್ಥ, ಕುತಂತ್ರದಿಂದ ಅಮಾನುಷವಾಗಿ ಹತ್ಯೆಗೀಡಾಗಿದ್ದ ಉದ್ಯಮಿ ಭಾಸ್ಕರ್‌ ಶೆಟ್ಟಿ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್​ ಶೆಟ್ಟಿ ಅವರನ್ನು ಜುಲೈ 16, 2016 ರಂದು ಅವರ ಉಡುಪಿ ಮನೆಯಲ್ಲಿ ಆರೋಪಿಗಳು ಭೀಕರವಾಗಿ ಸಾಯಿಸಿದ್ದರು. ಬಳಿಕ, ಸಾಕ್ಷ್ಯನಾಶ ಮಾಡಲು ಭಾಸ್ಕರ್​ ಶೆಟ್ಟಿ ಅವರ ದೇಹವನ್ನು ಹೋಮ ಕುಂಡದಲ್ಲಿ ಹಾಕಿ ಸುಟ್ಟುಹಾಕಿದ್ದರು. ಈ ಪ್ರಕರಣ ರಾಜ್ಯಾಧ್ಯಂತ ಭಾರೀ ಸಂಚಲನ ಮೂಡಿಸಿತ್ತು.

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಬಳಿಕ ಶವವನ್ನು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಅಪರಾಧಿಗಳೆಂದು ತೀರ್ಪು ನೀಡಲಾಗಿದೆ. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ತೀರ್ಪು ಪ್ರಕಟಿಸಲಿದ್ದಾರೆ.

ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ಕೈಗೆತ್ತಿಕೊಂಡ ಪೊಲೀಸರು ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ದೊರೆತರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ.


ambedkar image

LEAVE A REPLY

Please enter your comment!
Please enter your name here