ಒಂದು ದಿನದ ಉದ್ಯಮಶೀಲತಾ ಶಿಬಿರ

0
197

ವಿಜಯಪುರ:ಜು.30: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ, ಇವರ ಸಂಯುಕ್ತ ಆಶ್ರಯದಲ್ಲಿ ಇಂಡಿಯಲ್ಲಿ ಉದ್ಯೋಗ ಪ್ರಾರಂಭಿಸಲು ಇಚ್ಚಿಸುವ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಒಂದು ದಿನದ ಉದ್ಯಮಶೀಲತಾ ಶಿಬಿರವನ್ನು ಏರ್ಪಡಿಸಲಾಗಿದೆ.
ಜುಲೈ 31 ರಂದು ಬೆಳಿಗ್ಗೆ 9:00 ಗಂಟೆಗೆ ಕೃಷಿ ವಿಜ್ಞಾನ ಕೇಂದ್ರ, ಸ್ಟೇಷನ್ ರೋಡ್, ಇಂಡಿಯಲ್ಲಿ ಈ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ವಿಜಯಪುರ, ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಶಿಬಿರದಲ್ಲಿ,ಉದ್ಯಮ ಸ್ಥಾಪಿಸಲು ಬೇಕಾಗುವ ಮಾಹಿತಿ, ಬ್ಯಾಂಕ್ ಮತ್ತು ಕೈಗಾರಿಕಾ ಇಲಾಖೆಯಿಂದ ಸಿಗತಕ್ಕ ಸಹಾಯ, ಇವುಗಳ ಮಾಹಿತಿಯನ್ನು ಪರಿಣಿತರಿಂದ ನೀಡಲಾಗುವುದು.


LEAVE A REPLY

Please enter your comment!
Please enter your name here