ಅಮೃತ ಗ್ರಾಮ ಪಂಚಾಯತಿ ಯೋಜನೆಗೆ 25 ಗ್ರಾಮ ಪಂಚಾಯತಿಗಳು ಆಯ್ಕೆ: ಶಶಿಕಲಾ ಜೊಲ್ಲೆ

0
194
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ

ವಿಜಯಪುರ:ಸೆ.23: ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ಮಹತ್ವಕಾಂಕ್ಷೆಯ “ಅಮೃತ ಗ್ರಾಮ ಪಂಚಾಯತಿ” ಯೋಜನೆಗೆ ವಿಜಯಪುರ ಜಿಲ್ಲೆಯ 13 ತಾಲೂಕುಗಳಲ್ಲಿ 25ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮುಜರಾಯಿ, ಹಜ್, ವಕ್ಫ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಅಮೃತ ಗ್ರಾಮ ಪಂಚಾಯತಿ ಯೋಜನೆಯನ್ನು ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ ರವರು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಅದರಂತೆ ವಿಜಯಪುರ ಜಿಲ್ಲೆಯಲ್ಲಿ ಈ ಯೋಜನೆ ಅಡಿಯಲ್ಲಿ ನನ್ನ ಅಧ್ಯಕ್ಷತೆಯಲ್ಲಿ ಅಮೃತ ಗ್ರಾಮ ಪಂಚಾಯತಿ ಯೋಜನೆಗೆ 25 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ.

ಈ ಯೋಜನೆ ಅಡಿಯಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪ ಅಳವಡಿಕೆ, ಪ್ರತಿ ಮನೆಗೆ ಕುಡಿಯುವ ನೀರಿನ ನಲ್ಲಿ ಸಂಪರ್ಕ ಕಲ್ಪಿಸುವುದು. ಶೇ 100 ಘನತ್ಯಾಜ್ಯ ನಿರ್ವಹಣೆ ವಿಲೇವಾರಿ ಮಾಡುವುದು. ತ್ಯಾಜ್ಯ ನೀರು ವೈಜ್ಞಾನಿಕವಾಗಿ ವಿಸರ್ಜಿಸುವುದು. ಗ್ರಾಮ ಪಂಚಾಯತಿ ಕಟ್ಟಡಗಳಿಗೆ ಸೌರ ವಿದ್ಯುತ್ ಅಳವಡಿಸುವುದು. ಅಮೃತ ಉದ್ಯಾನಗಳ ನಿರ್ಮಾಣ ಹಾಗೂ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗುವುದು.

ವಿಜಯಪುರ ಜಿಲ್ಲೆಯ 13 ತಾಲೂಕುಗಳಲ್ಲಿ 25ಗ್ರಾಮ ಪಂಚಾಯತಿಗಳ ಆಯ್ಕೆಪಟ್ಟಿ

ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಕುಡಿಯುವ ನೀರು, ಶೌಚಾಲಯ ನಿರ್ಮಾಣ ಮಾಡುವುದು, ಶಾಲೆಯ ಆವರಣದಲ್ಲಿ ಆಟದ ಮೈದಾನ ಹಾಗೂ ಆವರಣ ಗೋಡೆ ನಿರ್ಮಾಣ ಹಾಗೂ ಕೆರೆ ಕಲ್ಯಾಣಿಗಳ ಪುನಶ್ಚೇತನ ಮಾಡಲಾಗುವುದು.

ಜಿಲ್ಲೆಯಲ್ಲಿ ಆಯ್ಕೆಯಾಗಿರುವ 25 ಗ್ರಾಮ ಪಂಚಾಯಿತಿಗಳ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು.ಇದಕ್ಕಾಗಿ ಪ್ರತೀ ಪಂಚಾಯ್ತಿಗೆ ಸರಾಸರಿ 3 ಕೋಟಿ ರೂ ವೆಚ್ಚಮಾಡಲಾಗುತ್ತಿದೆ. ಮಾರ್ಚ್ 31ರ ಒಳಗೆ ಯೋಜನೆ ಪೂರ್ಣಗೊಳಿಸಿದ ಪಂಚಾಯ್ತಿಗಳಿಗೆ ರೂ 25.00ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.


ambedkar image

LEAVE A REPLY

Please enter your comment!
Please enter your name here