ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಜಿಮ್ ಸಲಕರಣೆ: ಅರ್ಜಿ ಆಹ್ವಾನ

0
142
ಸಾಂದಂರ್ಭಿಕ ಚಿತ್ರ

ವಿಜಯಪುರ: 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಜಿಮ್ ಸಲಕರಣೆಗಳನ್ನು ನೀಡುವ ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಂತರರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕರ್ನಾಟಕದ ಕ್ರೀಡಾಪಟುಗಳ ವಿವರಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಾರ್ಯಾಲಯಕ್ಕೆ ದಿನಾಂಕ: 19-10-2021 ರೊಳಗಾಗಿ ಕಳುಹಿಸಿಕೊಡಬೇಕು.

ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08352-251085 ನ್ನು ಸಂಪರ್ಕಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ambedkar image

LEAVE A REPLY

Please enter your comment!
Please enter your name here