ನಟ ಪುನೀತರಾಜಕುಮಾರ ವಿಧಿವಶ: ಅಭಿಮಾನಿಗಳ ಆಕ್ರಂದನ

0
73

ಬೆಂಗಳೂರು: ಸ್ಯಾಂಡಲ್​ವುಡ್​ ನ ಖ್ಯಾತ ನಟ (ಅಪ್ಪು) ಖ್ಯಾತಿಯ ಪವರಸ್ಟಾರ ಪುನೀತರಾಜಕುಮಾರ ಅನಾರೋಗ್ಯ ಕಾರಣದಿಂದ ಇಂದು ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೇ ಅವರು ಅಗಲಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಕೋಟ್ಯಂತರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಪುನೀತ್​ ರಾಜ್​ಕುಮಾರ್​ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ಶಾಕ್​ ಆಗಿದೆ.

ಶುಕ್ರವಾರ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಬಾಲನಟನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪುನೀತ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಸೋಶಿಯಲ್ ಮೀಡಿಯಾ ಮೂಲಕ ಪ್ರಾರ್ಥಿಸಿದ್ದರು. ಪ್ರಾರ್ಥನೆ ಕೊನೆಗೂ ಇಡೇರಲೇ ಇಲ್ಲ.


LEAVE A REPLY

Please enter your comment!
Please enter your name here