ನಗರಸಭೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜಿಸಿ ಶ್ರೀರಾಮ ಸೇನೆಯಿಂದ ಪ್ರತಿಭಟನೆ

0
104

ಗದಗ: ಬೆಟಗೇರಿ ನಗರಸಭೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಶ್ರೀರಾಮ ಸೇನೆಯ ಸದಸ್ಯರು ಪ್ರತಿಭಟನೆ ನಡೆಸಿದರು. ಸಾರ್ವಜನಿಕ ಶೌಚಾಲಯ ದುರಸ್ಥಿ ಮಾಡಬೇಕೆಂದು ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಹಲವಾರು ಬಾರಿ ಮನವಿ ಸಲ್ಲಿಸಿದರು ಅಧಿಕಾರಿಗಳು ಗಮನಹರಿಸಿಲ್ಲ. ಬೇರೆ ದಾರಿಯಿಲ್ಲದೆ ಈ ರೀತಿಯ ಪ್ರತಿಭಟನೆ ಮಾಡಿದ್ದಾಗಿ ಶ್ರೀರಾಮ ಸೇನೆ ಧಾರವಾಡ ಮತ್ತು ಗದಗ ಸಂಚಾಲಕ ರಾಜು ಖಾನಪ್ಪನವರ್ ಹೇಳಿದರು.

ಸಾರ್ವಜನಿಕ ಶೌಚಾಲಯ ದುರಸ್ತಿ ಮಾಡದಿದ್ದರೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮೂಲಕ ಪ್ರತಿಭಟನೆ ಮಾಡುವುದಾಗಿ ಒಂದು ವಾರದ ಹಿಂದೆಯೇ ಗದಗ ಬೆಟಗೇರಿ ನಗರಸಭೆಗೆ ಮನವಿ ಪತ್ರ ಸಲ್ಲಿಸಿದ್ದರು. ಆದರೆ, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಕಚೇರಿಯ ವಿವಿಧ ಕಡೆಗಳಲ್ಲಿ ಮೂತ್ರ ವಿಸರ್ಜಿಸಿದರು.

ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದಾವಿಸಿದರೂ ಪ್ರತಿಭಟನಾಕಾರರನ್ನು ತಡೆಯಲು ಸಾಧ್ಯವಾಗಿಲ್ಲ. ಎಂಟು-ಹತ್ತು ದಿನಗಳಲ್ಲಿ ಶೌಚಾಲಯಗಳನ್ನು ದುರಸ್ಥಿ ಮಾಡೆ ಹೋದಲ್ಲಿ ಜಿಲ್ಲಾಧಿಕಾರಿ ಮತ್ತು ನಗರಸಭೆ ಕಚೇರಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ  ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.


LEAVE A REPLY

Please enter your comment!
Please enter your name here